ಬೆಂಗಳೂರು: ರೆಮ್ಡಿಸಿವಿರ್ ಇಂಜೆಕ್ಷನ್ ಅಕ್ರಮವಾಗಿ ಸಂಗ್ರಹಿಸಿ ದುಪ್ಪಟ್ಟು ಬೆಲೆಗೆ ಕಾಳ ಸಂತೆಯಲ್ಲಿ ಮಾರುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ರೆಮ್ಡಿಸಿವಿರ್ ಇಂಜೆಕ್ಷನ್ ಅಕ್ರಮ ಮಾರಾಟ: ಸರ್ಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಅರೆಸ್ಟ್ - ಸರ್ಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಅರೆಸ್ಟ್ ,
6 ರೆಮ್ಡಿಸಿವಿರ್ ಇಂಜೆಕ್ಷನ್ ಗಳನ್ನು ದುಪ್ಪಟ್ಟು ಹಣಕ್ಕೆ ಮಾರುತ್ತಿದ್ದ ಆರೋಪದಡಿ ಜಯನಗರ ಜನರಲ್ ಆಸ್ಪತ್ರೆಯ ಸ್ಟಾಫ್ ನರ್ಸ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಬಂಧನ
ಜಯನಗರ ಜನರಲ್ ಆಸ್ಪತ್ರೆಯ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಾರುತಿ ಬಂಧಿತ ಆರೋಪಿ. 6 ರೆಮ್ಡಿಸಿವಿರ್ ಇಂಜೆಕ್ಷನ್ ಗಳನ್ನು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಕೇಂದ್ರ ಅಪರಾಧ ಪತ್ತೆ ದಳದ ಪೊಲೀಸರು ಈತನನ್ನು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರು ಆರೋಪಿ ಮಾರುತಿಯನ್ನು ಬಂಧಿಸಿ ಘಟನೆಯ ಸಂಬಂಧ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾರುತಿಯನ್ನು ಹೆಚ್ಚಿನ ವಿಚಾರಣೆಗೂ ಕೂಡ ಒಳಪಡಿಸಿದ್ದಾರೆ.