ಬೆಂಗಳೂರು :ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳ ಜತೆ ಸಂಪರ್ಕ ಇಟ್ಟುಕೊಂಡು ನಗರಕ್ಕೆ ಮಾದಕ ವಸ್ತುಗಳನ್ನು ತರಿಸಿ ಮಾರಾಟ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾದ ಜಿಯೋ ಎಮಾಕೊ(32) ಎನ್ನುವ ಬಂಧಿತ ಆರೋಪಿಯಿಂದ 20 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ-ಎಕ್ಸ್ಟಸಿ ಮಾತ್ರೆಗಳು ಮತ್ತು 100 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಐದು ವರ್ಷಗಳ ಹಿಂದೆ ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದಾನೆ. ರಾಮಮೂರ್ತಿನಗರದ ಒಎಂಬಿಆರ್ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ನಗರದಲ್ಲಿ ಸಣ್ಣ-ಪುಟ್ಟ ವ್ಯವಹಾರ ಮಾಡಿಕೊಂಡಿದ್ದ. ಜತೆಗೆ ಗೋವಾ ಮೂಲದ ವ್ಯಕ್ತಿಯೊಬ್ಬನಿಂದ ಡ್ರಗ್ಸ್ಗಳನ್ನು ತರಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.