ಬೆಂಗಳೂರು:ವಿವಿಧ ಆ್ಯಪ್ಗಳ ಮೂಲಕ ಆನ್‌ಲೈನ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು, 3.5 ಲಕ್ಷ ರೂ. ನಗದು ಮತ್ತು ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಅ. 27 ರಂದು ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಮೂರು ಸ್ಥಳಗಳಲ್ಲಿ ಪ್ರಕರಣಗಳು ಬೆಳಕಿಗೆ ಬಂದಿದೆ. ದುಬೈನಲ್ಲಿ ನಡೆಯುತ್ತಿರುವ ಟಿ-20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಪಾಕಿಸ್ತಾನ - ನ್ಯೂಜಿಲ್ಯಾಂಡ್, ಸೌತ್ ಆಫ್ರಿಕಾ - ವೆಸ್ಟ್ ಇಂಡೀಸ್, ಇಂಗ್ಲೆಂಡ್ - ಬಾಂಗ್ಲಾದೇಶ, ಸ್ಕಾಟ್‌ಲ್ಯಾಂಡ್ - ನಮೀಬಿಯಾ ತಂಡಗಳ ಕ್ರಿಕೆಟ್ ಪಂದ್ಯಗಳಿಗೆ ಸಂಬಂಧಪಟ್ಟಂತೆ ಲಾರ್ಡ್ಸ್ ಎಕ್ಸ್ಚೇಂಜ್.ಕಾಮ್, ಜೆಟ್ ಎಕ್ಸ್ಚೇಂಜ್.ಕಾಮ್,ಸ್ಕೈ ಎಕ್ಸ್ಚೇಂಜ್.ಕಾಮ್ ಎಂಬ ಆನ್ಲೈನ್ ಆ್ಯಪ್ ಮತ್ತು ವೆಬ್‌ಸೈಟ್‌ಗಳ ಮೂಲಕ ಬೆಟ್ಟಿಂಗ್ ಚಟುವಟಿಕೆ ನಡೆಸಿದ್ದಾರೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮೊಬೈಲ್ ಫೋನ್, ವ್ಯಾಟ್ಸ್ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಸಂಪರ್ಕಿಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು. ಈ ಪಂದ್ಯಗಳ ಬಗ್ಗೆ ಕಟ್ಟಿದ್ದ ಹಣವನ್ನು ಗೆದ್ದವರಿಗೆ ನೀಡುವುದು ಮತ್ತು ಸೋತವರಿಂದ ಪಡೆದುಕೊಳ್ಳುತ್ತಾ ಹಣ ವಿನಿಮಯ ಮಾಡಿಕೊಳ್ಳುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.