ಬೆಂಗಳೂರು:ಕ್ರಿಕೆಟ್ ಸೋಲು-ಗೆಲುವು ಬಗ್ಗೆ ಬೆಟ್ಟಿಂಗ್ ಮಾಡುತ್ತಿರುವವರ ವಿರುದ್ಧ ಸಿಸಿಬಿ ಕಾರ್ಯಾಚರಣೆ ಮುಂದುವರೆಸಿದ್ದು, ನಿನ್ನೆ 3 ಕಡೆಗಳಲ್ಲಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ.
ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ: ನಾಲ್ವರು ಅಂದರ್ - bangalore latest news
ಪುಟ್ಟೇನಹಳ್ಳಿ, ಕೋಣನಕುಂಟೆ, ಬ್ಯಾಟರಾಯನಪುರ ಸೇರಿ 3 ಕಡೆಗಳಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ತಂಡ ದಾಳಿ ನಡೆಸಿ ಆನ್ಲೈನ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದೆ.
ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ನಾಲ್ವರು ಅಂದರ್!
ಪುಟ್ಟೇನಹಳ್ಳಿ, ಕೋಣನಕುಂಟೆ, ಬ್ಯಾಟರಾಯನಪುರ ಸೇರಿ 3 ಕಡೆಗಳಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ಮಾಡಿದ ಸಿಸಿಬಿ ತಂಡ, ಆನ್ಲೈನ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದೆ. ಈ ಆರೋಪಿಗಳು ಮೊಬೈಲ್ ಮುಖಾಂತರ ಬುಕ್ಕಿಗಳನ್ನು ಬರಮಾಡಿಕೊಂಡು ತಂಡದ ಸೋಲು-ಗೆಲುವು ಬಗ್ಗೆ ಬೆಟ್ಟಿಂಗ್ನಲ್ಲಿ ತೊಡಗಿದ್ದರು. ಸದ್ಯ ಅಡ್ಡೆ ಮೇಲೆ ಸಿಸಿಬಿ ದಾಳಿ ಮಾಡಿ 6 ಮೊಬೈಲ್, 4 ಲಕ್ಷದ 91 ಸಾವಿರ ರೂ. ನಗದು ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದಾರೆ.