ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಕ್ಲಬ್ ಮೇಲೆ ಸಿಸಿಬಿ ದಾಳಿ... 17 ಜನರ ಬಂಧನ - ಸಿಸಿಬಿ

ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕ್ಲಬ್​ನಲ್ಲಿ ಸದಸ್ಯರು ಹಣ ಕಟ್ಟಿ ಇಸ್ಪೀಟ್ ಆಟವಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 17 ಜನರನ್ನು ಬಂಧಿಸಿದ್ದಾರೆ.

ಸೆವೆನ್ ಸ್ಟಾರ್ ಕ್ಲಬ್ ಮೇಲೆ ಸಿಸಿಬಿ ದಾಳಿ

By

Published : Jun 28, 2019, 2:43 PM IST

ಬೆಂಗಳೂರು:ನಗರದ ರಿಕ್ರಿಯೇಷನ್ ಕ್ಲಬ್​ವೊಂದರ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ‌ಮಾಡಿ‌ ಸುಮಾರು 17 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಈ ಕ್ಲಬ್​ನಲ್ಲಿ ಸದಸ್ಯರು ಹಣವನ್ನು ಪಣವಾಗಿ ಇಟ್ಟು ಇಸ್ಪೀಟ್ ಆಟವಾಡುತ್ತಿದ್ದಾರೆ ಎಂಬ ಮಾಹಿತಿ ದೊರೆತಿತ್ತು.

ಖಚಿತ ಮಾಹಿತಿ ‌ಮೇರೆಗೆ ಸಿಸಿಬಿ ಪೊಲೀಸ್ ಜಂಟಿ ಆಯುಕ್ತರಾದ ರವಿಕಾಂತೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆಸಿ 17 ಜನ ಆರೋಪಿಗಳನ್ನು ಬಂಧಿಸಿ, ನಗದು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details