ಕರ್ನಾಟಕ

karnataka

ETV Bharat / state

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ - CCB attacks on prostitution centre

ಯುವತಿಯರಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ನಗದು, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

CCB attacks on prostitution centre in Bangalore
ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ

By

Published : Oct 9, 2020, 2:30 PM IST

ಬೆಂಗಳೂರು:ಸಲೂನ್ ಮತ್ತು ಸ್ಪಾದಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರು ಯುವತಿಯರನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯರಿಗೆ ಹಣದ ಸಹಾಯ ಮಾಡುತ್ತೇವೆ. ಹೀಗಾಗಿ ಹೆಚ್ಚಿನ ಸಂಪಾದನೆ ಮಾಡಬಹುದು ಎಂದು ಆಸೆ ತೋರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಗಿರಾಕಿಗಳನ್ನ ಫೋನ್ ಆ್ಯಪ್​ ಮೂಲಕ ಸಂಪರ್ಕ ಮಾಡುತ್ತಿದ್ದ ವಿಷಯ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತರಿಂದ ನಗದು, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.

ABOUT THE AUTHOR

...view details