ಬೆಂಗಳೂರು:ನಗರದ ಬೊಮ್ಮನಹಳ್ಳಿಯ ಮನೆಯಯೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರ ಕಾರ್ಯಾಚರಣೆ.. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ.. - ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್
ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಗನ್ ಬಂಧಿತ ಆರೋಪಿ, ಈತ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ ಬಿಟಿ ಕಂಪನಿಯವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಪಡೆದ ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಸಿಸಿವಿ ಡಿಸಿಪಿ ರವಿ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾದ ಹಿನ್ನೆಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿದ್ದು, ಜಗನ್ ಸಿಸಿಬಿ ಬಲೆಗೆ ಬಿದ್ದಿದ್ದಾನೆ. ಈತನ ಮನೆಯಿಂದ ಎರಡು ಕೆ ಜಿ ಗಾಂಜಾ ವಶಪಡಿಸಿಕೊಂಡು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಿದ್ದಾರೆ.