ಬೆಂಗಳೂರು:ಮಾದಕ ವಸ್ತು ಮಾರಾಟ ಹಾಗೂ ಖರೀದಿ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆದಿತ್ಯ ಆಳ್ವ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ಆರೋಪಿಯ ಸಹೋದರಿ ಪ್ರಿಯಾಂಕಾ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮಾತನಾಡಿದ್ದಾರೆ.
ಒಬೆರಾಯ್ ಮನೆ ಮೇಲೆ ದಾಳಿ: ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದೇನು.?
ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪಂಚಭಾಷಾ ನಟ ವಿವೇಕ್ ಒಬೆರಾಯ್ ಅವರ ಮುಂಬೈಯಲ್ಲಿರುವ ನಿವಾಸದ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ಕುರಿತು ಸಿಸಿಬಿ ಮುಖ್ಯಸ್ಥರು ಪ್ರತಿಕ್ರಿಯಿಸಿದ್ದಾರೆ.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್
ಡ್ರಗ್ಸ್ ಕೇಸ್ನಲ್ಲಿ ನಾಪತ್ತೆಯಾಗಿರುವ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಇತ್ತೀಚಿಗಷ್ಟೇ ಅಶ್ವಿನ್ ಬೂಗಿಯನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಮುಂಬೈನಲ್ಲಿರುವ ಆರೋಪಿಯ ಸಹೋದರಿ ಪ್ರಿಯಾಂಕಾ ಮನೆಯಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು, ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಪರಿಶೀಲನೆ ನಡೆಸಿ ವಿಚಾರಣೆ ನಡೆಸಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.