ಕರ್ನಾಟಕ

karnataka

ETV Bharat / state

ಡ್ರಗ್ಸ್​ ಕೇಸ್​: ಮಾಜಿ ಸಚಿವ ಪುತ್ರನ ವಿಚಾರಣೆ ತೀವ್ರಗೊಳಿಸಿದ ಸಿಸಿಬಿ - Darshan, son of Rudrappa Lamani

ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ, ಆರೋಪಿಗಳನ್ನು 9 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ದರ್ಶನ್ ಭಾಗಿಯಾಗಿರುವ ಬಗ್ಗೆ ಪುರಾವೆ ಸಂಗ್ರಹಿಸುವ ಕೆಲಸ ಆರಂಭವಾಗಿದೆ. ದರ್ಶನ್ ಹಾಗೂ ಇತರ ಆರೋಪಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದ ನಂತರವೇ ಪ್ರಕರಣದ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.

ದರ್ಶನ್​
ದರ್ಶನ್​

By

Published : Nov 16, 2020, 10:02 AM IST

Updated : Nov 16, 2020, 11:54 AM IST

ಬೆಂಗಳೂರು:ಡ್ರಗ್ಸ್‌ ಪ್ರಕರಣದಲ್ಲಿ ಬಂಧಿಸಲಾಗಿರುವ ಮಾಜಿ ಸಚಿವ ಹಾವೇರಿಯ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸಹಚರರನ್ನು ಸಿಸಿಬಿ ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ದೀಪಾವಳಿ ಹಬ್ಬ ಹಿನ್ನೆಲೆ ಕಳೆದೆರಡು ದಿನಗಳಿಂದ ವಿಚಾರಣೆ ಮಾಡಿರಲಿಲ್ಲ. ಹೀಗಾಗಿ ಇದೀಗ ದರ್ಶನ್ ಸೇರಿದಂತೆ 9 ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.

ವಿದೇಶದಿಂದ ಅಂಚೆ ಕಚೇರಿಯೊಂದಕ್ಕೆ ಪಾರ್ಸೆಲ್ ಬಂದಿದ್ದ 500 ಗ್ರಾಂ ಹೈಡ್ರೋ ಗಾಂಜಾ ಜಪ್ತಿ ಮಾಡಿದ್ದ ಕೆಂಪೇಗೌಡ ಠಾಣೆ ಪೊಲೀಸರು, ಸುಜಯ್ ಎಂಬಾತನನ್ನು ಬಂಧಿಸಿದ್ದರು. ಆತ ನೀಡಿದ್ದ ಮಾಹಿತಿಯಂತೆ ಸ್ನೇಹಿತರಾದ ಹೇಮಂತ್ ಹಾಗೂ ಸುನೇಶ್‌ನನ್ನು ಗೋವಾದಲ್ಲಿ ಸೆರೆಹಿಡಿಯಲಾಗಿತ್ತು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಡಿ ದರ್ಶನ್ ಲಮಾಣಿ ಬಂಧಿಸಿ, ವಿಚಾರಣೆಗಾಗಿ ಕೆಂಪೇಗೌಡ ನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ಇದರ ನಡುವೆಯೇ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದರು.

ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ, ಆರೋಪಿಗಳನ್ನು 9 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ದರ್ಶನ್ ಭಾಗಿ ಬಗ್ಗೆ ಪುರಾವೆ ಸಂಗ್ರಹಿಸುವ ಕೆಲಸ ಆರಂಭವಾಗಿದೆ. ದರ್ಶನ್ ಹಾಗೂ ಇತರ ಆರೋಪಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದ ನಂತರವೇ ಪ್ರಕರಣದ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.

Last Updated : Nov 16, 2020, 11:54 AM IST

ABOUT THE AUTHOR

...view details