ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ ಬೆನ್ನಲ್ಲೇ ಕೊರೊನಾ ಎಂದು ಹೇಳಿ ಚಿಕಿತ್ಸೆ ಪಡೆದಿದ್ದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲು ಸಿಸಿಬಿ ಮುಂದಾಗಿದೆ. ಸದ್ಯ ಈ ಸಂಬಂಧ ಖಾಸಗಿ ಆಸ್ಪತ್ರೆಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.
ಬಂಧನ ಭೀತಿಯಲ್ಲಿದ್ದ ಸಂಪತ್ ರಾಜ್ ಕೊರೊನಾ ಬಂದಿರುವುದಾಗಿ ಹೇಳಿ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವಿಚಾರಣೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿತ್ತು. ಕೊವೀಡ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಂಪತ್ ರಾಜ್ ತಿಳಿಸಿದ್ದರು.