ಬೆಂಗಳೂರು:ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅತ್ಯಾಪ್ತನಾದ ಫ್ರೇಜರ್ ಟೌನ್ ಬಿಬಿಎಂಪಿ ಮಾಜಿ ಸದಸ್ಯ ಜಾಕೀರ್ಗೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಎರಡನೇ ಬಾರಿ ನೋಟಿಸ್ ನೀಡಿದೆ.
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಆಪ್ತನಿಗೆ ಸಿಸಿಬಿ ನೋಟಿಸ್ - DJ village, KG village riot case
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ರೇಜರ್ ಟೌನ್ ಬಿಬಿಎಂಪಿ ಮಾಜಿ ಸದಸ್ಯ ಜಾಕೀರ್ಗೆ ಸಿಸಿಬಿ ನೋಟಿಸ್ ನೀಡಿದ್ದು, ಒಂದು ವೇಳೆ ವಿಚಾರಣೆಗೆ ಹಾಜರಾದರೆ ಜಾಕಿರ್ ಬಂಧನ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಮಾಜಿ ಮೇಯರ್ ಆಪ್ತನಿಗೆ ಸಿಸಿಬಿ ನೋಟಿಸ್
ಈಗಾಗಲೇ ಒಂದು ಬಾರಿ ವಿಚಾರಣೆ ನಡೆಸಿ ಅನೇಕ ಮಾಹಿತಿ ಕಲೆ ಹಾಕಿದ್ದರು. ಘಟನೆಯಲ್ಲಿ ಜಾಕಿರ್ ಪಾತ್ರದ ಬಗ್ಗೆ ಸಿಸಿಬಿ ಮಾಹಿತಿ ಕಲೆ ಹಾಕಿದೆ. ಘಟನೆ ನಡೆಯಲು ಹುಡುಗರನ್ನು ಕರೆಸಿ ಗಲಾಟೆ ಮಾಡಿಸಿದ ಆರೋಪ ಜಾಕಿರ್ ಮೇಲೆ ಇದೆ ಎನ್ನಲಾಗಿದೆ.
ಹಾಗೆಯೇ ಗಲಭೆಕೋರರ ಜೊತೆ ಕಾರ್ಪೋರೇಟರ್ ಜಾಕಿರ್‌ಗೆ ನೇರವಾದ ಸಂಬಂಧ ಇದೆಯಂತೆ. ಒಂದು ವೇಳೆ ವಿಚಾರಣೆಗೆ ಹಾಜರಾದರೆ ಜಾಕಿರ್ ಬಂಧನ ಬಹುತೇಕ ಖಚಿತ ಎನ್ನಲಾಗುತ್ತಿದೆ.