ಬೆಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರು ಸ್ಫೋಟದ ಶಂಕಿತ ಉಗ್ರ ಸಿಕ್ಕಿದ್ದು ಹೇಗೆ?: ಸಿಸಿಬಿ ಜಂಟಿ ಆಯುಕ್ತರ ಮಾಹಿತಿ
ತಲೆಮರೆಸಿಕೊಂಡಿದ್ದ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈತನ ಬಗ್ಗೆ ಕಳೆದ ವರ್ಷ ನಮಗೆ ಮಾಹಿತಿ ಸಿಕ್ಕಿತ್ತು. ಈ ಆಧಾರದ ಮೇಲೆ ಎಲ್ಲಾ ಕಡೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೆವು. ನಿನ್ನೆ ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣ ಬಳಿ ಈತ ಬಂದಾಗ ಕೇಂದ್ರ ತನಿಖಾ ದಳದ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದೇವೆ ಎಂದು ತಿಳಿಸಿದರು.
ಬಾಂಬ್ ಸ್ಫೋಟಕ್ಕೆ ಕಚ್ಚಾ ವಸ್ತುಗಳು ಎಲ್ಲಿ ಸಿಕ್ಕಿದ್ದವು. ಆರೋಪಿ 12 ವರ್ಷಗಳಿಂದ ಎಲ್ಲಿದ್ದ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಸಂದೀಪ್ ಪಾಟೀಲ್ ಹೇಳಿದರು.