ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಪೊಲೀಸರು ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದಾರೆ.
ನಿನ್ನೆ ವಿಚಾರಣೆಗೆ ಹಾಜರಾಗದ ಪ್ರಿಯಾಂಕಾ ಆಳ್ವ: ವಿವೇಕ್ ಒಬೆರಾಯ್ ಪತ್ನಿಗೆ ಮತ್ತೆ ಸಿಸಿಬಿ ನೋಟಿಸ್ - Sandalowood Drug case updates
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ನಿನ್ನೆ ಪ್ರಿಯಾಂಕಾ ಆಳ್ವ ವಿಚಾರಣೆಗೆ ಬಾರದ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ಇಂದು ಮತ್ತೆ ನೋಟಿಸ್ ನೀಡಿದ್ದಾರೆ.
ಪ್ರಕರಣದಲ್ಲಿ ಆದಿತ್ಯ ಆಳ್ವ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಆತನ ಸಹೋದರಿ ಪ್ರಿಯಾಂಕಾ ಆಳ್ವ ಮುಂಬೈ ನಿವಾಸಕ್ಕೆ ಸರ್ಚ್ ವಾರೆಂಟ್ ಪಡೆದು ತೆರಳಿದ್ದ ಸಿಸಿಬಿ ಅಧಿಕಾರಿಗಳು, ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಅಲ್ಲದೆ ನಿನ್ನೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಆದರೆ ನಿನ್ನೆ ಪ್ರಿಯಾಂಕಾ ವಿಚಾರಣೆಗೆ ಹಾಜರಾಗಿರಲಿಲ್ಲ.
ಇಂದು ಮತ್ತೆ ನೋಟಿಸ್ ನೀಡಿರುವ ಸಿಸಿಬಿ ಅಧಿಕಾರಿಗಳು, ಅ. 20ರಂದು ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆದಿತ್ಯ ಆಳ್ವ ವಿರುದ್ಧ ಪ್ರಕರಣ ದಾಖಲಾಗಿದೆ.