ಬೆಂಗಳೂರು: ಬೆಂಗಳೂರು ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಅಧಿಕಾರಿಗಳಿಗೆ ಕೊರೊನಾ ಸೋಂಕು - Corona firm to CCB Officials in Bangalore
ಬೆಂಗಳೂರು ಡ್ರಗ್ಸ್ ಜಾಲದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ.
![ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಅಧಿಕಾರಿಗಳಿಗೆ ಕೊರೊನಾ ಸೋಂಕು Corona firm to CCB Officials in Bangalore](https://etvbharatimages.akamaized.net/etvbharat/prod-images/768-512-9120484-thumbnail-3x2-ccb.jpg)
ಬೆಂಗಳೂರು ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಅಧಿಕಾರಿಗಳಿಗೆ ಕೊರೊನಾ
ಓರ್ವ ಎಸಿಪಿ, ಆರು ಮಂದಿ ಇನ್ಸ್ಪೆಕ್ಟರ್ಗಳ ಕೋವಿಡ್ ವರದಿ ಪಾಸಿಟಿವ್ ಬಂದಿದ್ದು, ಸದ್ಯ ಇವರ ಸಂಪರ್ಕದಲ್ಲಿರುವವರು ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಹೀಗಾಗಿ ಬೆಂಗಳೂರು ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಗೆ ತೊಡಕಾಗಿದೆ. ಬಂಧಿತ ಆರೋಪಿಗಳಿಗೆ ಈಗಾಗಲೇ ಕೋವಿಡ್-19 ಟೆಸ್ಟ್ ಮಾಡಿಸಿ, ಜೈಲಿಗೆ ಕಳುಹಿಸಲಾಗಿದೆ.
ಸದ್ಯ ಎನ್ಡಿಪಿಎಸ್ ಕೇಸ್‌ನಲ್ಲಿ ಪೇಪರ್ ವರ್ಕ್ ಬಹಳ ಮುಖ್ಯವಾಗಿದ್ದು, ಕೆಲಸಕ್ಕೆ ಹಾಜರಾಗುತ್ತಿರುವ ಅಧಿಕಾರಿಗಳ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ. ಹೀಗಾಗಿ, ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ.
TAGGED:
ಸಿಸಿಬಿ ಅಧಿಕಾರಿಗಳಿಗೆ ಕೊರೊನಾ