ಬೆಂಗಳೂರು: ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದ ಕಿಡಿಗೇಡಿಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು 167 ಮಂದಿಯನ್ನು ಬಂಧಿಸಿದ್ದು, ಸುಮಾರು 26 ಲಕ್ಷ ರೂಪಾಯಿಯನ್ನು ವಶಪಡಿಸಿಕೊಂಡಿದ್ದಾರೆ.
ಸಿಸಿಬಿ ಕಾರ್ಯಾಚರಣೆ: 26 ಲಕ್ಷ ರೂ. ನಗದು ಜಪ್ತಿ, 167 ಮಂದಿಯ ಬಂಧನ - CCB Police arrest 167 People
ಕೋವಿಡ್ ಲಾಕ್‌ಡೌನ್ ವೇಳೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದ 167 ಮಂದಿಯನ್ನು ಬಂಧಿಸಿದ್ದು, ಸುಮಾರು 26 ಲಕ್ಷ ರೂಪಾಯಿಯನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಿಸಿಬಿ ಕಾರ್ಯಾಚರಣೆ
ಕ್ರಿಕೆಟ್ ಬೆಟ್ಟಿಂಗ್, ಜೂಜಾಟ, ಸ್ಪಾ, ಮಸಾಜ್ ಪಾರ್ಲರ್, ವೇಶ್ಯಾವಾಟಿಕೆ, ಆನ್‌ಲೈನ್ ಗೇಮಿಂಗ್ ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದ ಮನೆ, ಹೋಟೆಲ್, ಅಪಾರ್ಟ್‌ಮೆಂಟ್‌ಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ 167 ಮಂದಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಯುವತಿ ಸೇರಿ ಯುವಕರಿಬ್ಬರ ಮೇಲೆ ಕ್ರೂರವಾಗಿ ಹಲ್ಲೆ... ವಿಡಿಯೋ ವೈರಲ್