ಬೆಂಗಳೂರು:ನಗರದಲ್ಲಿ ಮಾದಕ ಪದಾರ್ಥ ಸರಬರಾಜು ಮಾಡುತ್ತಿದ್ದವರ ಮೇಲೆ ಸಿಸಿಬಿ ಹದ್ದಿನ ಕಣ್ಣಿಟ್ಟಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ನೈಜೀರಿಯಾ ಮೂಲದ ಜಾನ್ ಬಾಸ್ಕೋ ಚಿಬುಕಿ ಹಾಗೂ ಸೈಯದ್ ಇರ್ಫಾನ್ ಬಂಧಿತರು.
ಈ ಆರೋಪಿಗಳು ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಾಲೇಜು ಹಾಗೂ ಕೆಲ ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ದಾಳಿ ನಡೆಸಿದ್ದಾರೆ.