ಕರ್ನಾಟಕ

karnataka

ETV Bharat / state

ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳ ಬಂಧಿಸಿದ ಸಿಸಿಬಿ

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಪೈಪ್‌ಲೈನ್‌ ರಸ್ತೆಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರೌಡಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳ ಬಂಧಿಸಿದ ಸಿಸಿಬಿ
CCB police arrested accused

By

Published : Mar 1, 2020, 2:58 PM IST

ಬೆಂಗಳೂರು:ದರೋಡೆಗೆ ಸಂಚು ರೂಪಿಸಿದ್ದ ರೌಡಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಕ್ಷಿತ್ ಅಲಿಯಾಸ್ ಮಂಜುನಾಥ್, ನವೀನ, ಸುನೀಲ್, ವಿನಯ್ ಬಂಧಿತ ಆರೋಪಿಗಳು. ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಪೈಪ್‌ಲೈನ್‌ ರಸ್ತೆಯಲ್ಲಿ ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ನಗದು ಚಿನ್ನಾಭರಣ ಬೆಲೆ ಬಾಳುವ ವಸ್ತುಗಳನ್ನು ದೋಚಲು ಆರೋಪಿಗಳು ಸಂಚು ರೂಪಿಸಿದ್ದರಂತೆ. ಈ ಕುರಿತು ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿ ಒಂದು ಕತ್ತಿ, ಒಂದು ಲಾಂಗ್, ಖಾರದ ಪುಡಿ ವಶಪಡಿಸಿಕೊಂಡಿದ್ದಾರೆ.

ಇನ್ನು ಬಂಧಿತ ಆರೋಪಿಗಳ ಮೇಲೆ ಕೆಲ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಆರೋಪಿ ರಕ್ಷಿತ್ ಕಾಮಾಕ್ಷಿಪಾಳ್ಯ ಠಾಣೆಯ ರೌಡಿ ಪಟ್ಟಿಯಲ್ಲಿದ್ದು ಕೊಲೆ ಯತ್ನ,ಹಲ್ಲೆ‌,ದರೋಡೆ ಸೇರಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ಐಪಿಸಿ ಕಲಂ 399, 402ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

ABOUT THE AUTHOR

...view details