ಬೆಂಗಳೂರು:ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬೆಲೆ ಬಾಳುವ ವಸ್ತುಗಳ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಾಕ್ಡೌನ್ ಸಡಿಲಿಕೆ: ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಗಳ ಬಂಧನ - Bangalore crime latest news
ಲಾಕ್ಡೌನ್ ಸಡಿಲಿಕೆಯಾಗಿದ್ದು, ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲು ಸಂಚು ರೂಪಿಸಿದ್ದ ರೌಡಿಗಳ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರವಿಶಂಕರ್, ಶರತ್, ದೀಪಕ್ ಕುಮಾರ್, ಕೀರ್ತಿ, ಸಂತೋಷ್, ಗಿಲ್ ಭರ್ಟ್ ಬಂಧಿತ ಆರೋಪಿಗಳು. ಈ ಆರೋಪಿಗಳು ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದರು. ಈ ಕುರಿತು ಮಾಹಿತಿ ತಿಳಿದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಮೇಲೆ ನಗರದ ಹಲವಾರು ಠಾಣೆಗಳಲ್ಲಿ ಕೊಲೆ ಪ್ರಕರಣ, ಕೊಲೆ ಯತ್ನ, ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳಿಂದ ಮರದ ಹಿಡಿಕೆ, ಕಬ್ಬಿಣದ ಲಾಂಗ್, ಚಾಕು, ಖಾರದ ಪುಡಿ, ಕೃತ್ಯಕ್ಕೆ ಬಳಸಿದ್ದ ಓಮಿನಿ, ಹೋಂಡಾ ದ್ವಿಚಕ್ರ ವಾಹನ ವಶಪಡಿಸಿದ್ದಾರೆ.
ತನಿಖೆ ವೇಳೆ ಆರೋಪಿಗಳು ಸುಲಭವಾಗಿ ಹಣ ಮಾಡುವ ನಿಟ್ಟಿನಲ್ಲಿ ಈ ರೀತಿಯ ಕೃತ್ಯಕ್ಕೆ ಮುಂದಾಗಿರುವ ವಿಚಾರ ಬಯಲಾಗಿದ್ದು, ಸದ್ಯ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.