ಬೆಂಗಳೂರು: ನಗರದ ಅಕ್ರಮ ಜೂಜು ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಒಟ್ಟು 37 ಜನ ಜೂಜುಕೋರರನ್ನು ಬಂಧಿಸಿದ್ದಾರೆ. ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಏಕದಂತ ಶ್ರೀ ವಿನಾಯಕ ಅಸೋಸಿಯೇಷನ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ರಿಕ್ರಿಯೆಷನ್ ಕ್ಲಬ್‌ಗಳಲ್ಲಿ ಅಕ್ರಮವಾಗಿ ಜೂಜಾಟ ನಡೆಸಲಾಗುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಜೂಜು ಅಡ್ಡೆಗಳ ಮೇಲೆ ಪೊಲೀಸ್ ದಾಳಿ: 37 ಜನರ ಬಂಧನ - ಜೂಜು ಅಡ್ಡೆ
ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಏಕದಂತ ಶ್ರೀ ವಿನಾಯಕ ಅಸೋಸಿಯೇಷನ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಅಕ್ರಮವಾಗಿ ಜೂಜಾಟ ನಡೆಸಲಾಗುತ್ತಿತ್ತು.
ಜೂಜುಕೋರರು
ಮಹೇಶ್, ಸಂತೋಷ್, ಲಿಂಗರಾಜು, ಸಂತೋಷ್, ಉಮೇಶ್, ಲೋಕೇಶ್, ರತ್ನಾಕರ್ ಸೇರಿದಂತೆ 37 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರಿಂದ ನಗದು ಟೋಕನ್ ವಶಪಡಿಸಿಕೊಂಡು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.