ಬೆಂಗಳೂರು :ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಇತರೆ ಬಿಜೆಪಿ ನಾಯಕರ ಹೆಸರೇಳಿಕೊಂಡು ವಂಚನೆ ಮಾಡುತ್ತಿದ್ದ ಯುವರಾಜ್ ಎಂಬಾತನ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದೆ.
ಈತ ಬಿಜೆಪಿ ನಾಯಕರ ಜೊತೆ ಫೋಟೋ ತೆಗೆಸಿಕೊಂಡು ಬಹಳಷ್ಟು ಮಂದಿಗೆ ತಾನು ಬಿಜೆಪಿ ನಾಯಕರ ಜೊತೆ ಬಹಳ ಆತ್ಮೀಯನಾಗಿದ್ದೇನೆ ಎಂದು ನಂಬಿಸುತ್ತಿದ್ದ. ಇತ್ತೀಚಿಗೆ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವರಿಗೆ ಕೆಎಸ್ಆರ್ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿ ಆತನಿಂದ ಹಣ ಪಡೆದಿದ್ದಾನೆ.