ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣ ಸಂಬಂಧ ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದ ರಾಗಿಣಿಗೆ ಸಿಸಿಬಿಯ ಹಿರಿಯ ಅಧಿಕಾರಿಗಳು ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಸ್ಯಾಂಡಲ್ವುಡ್ಗೆ ಡ್ರಗ್ಸ್ ಲಿಂಕ್ ಆರೋಪ ಪ್ರಕರಣ: ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ಸಮನ್ಸ್ - sandalwood drug link
ಸ್ಯಾಂಡಲ್ವುಡ್ನ ಡ್ರಗ್ಸ್ ನಂಟು ಆರೋಪ ಪ್ರಕರಣ ಸಂಬಂಧ ನಟಿ ರಾಗಿಣಿಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದ್ದು, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಕೇಸ್: ನಾಳೆಯೆ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ಸಮನ್ಸ್
ಅನಾರೋಗ್ಯದ ನೆಪವೊಡ್ಡಿ ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದ ರಾಗಿಣಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಿಸಿಬಿ ಸಮನ್ಸ್ ಜಾರಿ ಮಾಡಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಪೊಲೀಸರು, ಸ್ಯಾಂಡಲ್ವುಡ್ ನಟಿಯರ ಕುರಿತಂತೆ ಮಾಹಿತಿ ಕಲೆಹಾಕುತ್ತಿದ್ದಾರೆ. ಅಲ್ಲದೆ ಮಾದಕ ಲೋಕದ ಲಿಂಕ್ ಬಗ್ಗೆಯೂ ವಿಚಾರಣೆ ನಡೆಸುತ್ತಿದ್ದಾರೆ.
ನಟಿ ರಾಗಿಣಿ ಆಪ್ತ ರವಿಶಂಕರ್ ಸಿಸಿಬಿ ಬಳಿ ಬಹಳಷ್ಟು ಮಾಹಿತಿ ಹಂಚಿಕೊಂಡಿದ್ದಾನೆ ಎನ್ನಲಾಗ್ತಿದ್ದು, ಈ ಹಿನ್ನೆಲೆ ರಾಗಿಣಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.