ಬೆಂಗಳೂರು:ಕೊರೊನಾ ಮಹಾಮಾರಿ ನಡುವೆಯೂ ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಐವರು ಯುವತಿಯರನ್ನು ರಕ್ಷಿಸಿದ್ದಾರೆ.
ವೇಶ್ಯಾವಾಟಿಕೆ ದಂಧೆ: ಬೆಂಗಳೂರಲ್ಲಿ ಇಬ್ಬರ ಬಂಧನ, ಐವರು ಯುವತಿಯರ ರಕ್ಷಣೆ - ccb raid prostitution racket
ಬೆಂಗಳೂರಿನ ಲಾಡ್ಜ್ವೊಂದರಲ್ಲಿ ಅನ್ಯ ರಾಜ್ಯದ ಹಾಗೂ ಸ್ಥಳೀಯ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ದಂಧೆ
ಸತೀಶ್ ಹಾಗೂ ರಾಜಾ ಎಂಬುವವರೇ ಬಂಧಿತ ಆರೋಪಿಗಳು. ಇವರು ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ವೊಂದರಲ್ಲಿ ಅನ್ಯರಾಜ್ಯ ಹಾಗೂ ಸ್ಥಳೀಯ ಯುವತಿಯರನ್ನು ಬಳಸಿಕೊಂಡು ದಂಧೆ ನಡೆಸುತ್ತಿದ್ದರು.
ಈ ಬಗ್ಗೆ ಮಾಹಿತಿ ತಿಳಿದು ಸಿಸಿಬಿ ಮಹಿಳಾ ಘಟಕ ದಾಳಿ ನಡೆಸಿದೆ. ಕೊರೊನಾ ವೈರಸ್ ಹಿನ್ನೆಲೆ ಲಾಡ್ಜ್ಗಳಿಗೆ ಯಾರೂ ಬಾರದಿರುವುದರಿಂದ ಮಾಲೀಕರು ಅಡ್ಡದಾರಿ ಹಿಡಿದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಲಾಡ್ಜ್ ಮಾಲೀಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.