ಬೆಂಗಳೂರು:ಅಪರಾಧ ಚಟುವಟಿಕೆ ನಡೆಸುತ್ತಿದ್ದ ಗಂಭೀರ ಆರೋಪದಡಿ ನಗರದ ಕುಖ್ಯಾತ ರೌಡಿಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ಇಂದು ಬೆಳ್ಳಂಬೆಳ್ಳಗೆ ದಾಳಿ ಮಾಡಿದ್ದಾರೆ. ಈ ಸಂದರ್ಭದ್ಲಲಿ 86 ಕ್ಕೂ ಹೆಚ್ಚು ಮನೆಗಳನ್ನು ಐವರು ಎಸಿಪಿ ನೇತೃತ್ವದ ಪೊಲೀಸರ ತಂಡ ಶೋಧಿಸಿದ್ದು, 25 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ್, ಬೇಕರಿ ರಘು ಹಾಗು ಒಂಟೆ ರೋಹಿತ್ ಎಂಬಾತ ಸೇರಿದಂತೆ ಹಲವು ರೌಡಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಕೆಲ ರೌಡಿಗಳು ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.