ಕರ್ನಾಟಕ

karnataka

ETV Bharat / state

ಸ್ಪಾ,ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ: ಯುವತಿಯರ ರಕ್ಷಣೆ, ನಾಲ್ವರು ಅರೆಸ್ಟ್ - CCB raids

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಹಾಗೂ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

CCB raids
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಹಾಗೂ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ದಾಳಿ..

By

Published : Oct 10, 2020, 9:41 AM IST

ಬೆಂಗಳೂರು:ಕೋರಮಂಗಲ ಹಾಗೂ ಪುಟ್ಟಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ಇರುವ ಸ್ಪಾ ಹಾಗೂ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ವೇಶ್ಯಾವಾಟಿಕೆಯಲ್ಲಿ ತೊಡಗಿದ ಹುಡುಗಿಯರನ್ನು ರಕ್ಷಣೆ ಮಾಡಲಾಗಿದೆ. ಬಂಧಿತ ಆರೋಪಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಯುವತಿಯರನ್ನು ಬೇರೆ ರಾಜ್ಯದಿಂದ ಕರೆತಂದಿದ್ದರು. ನಂತರ ಹೆಚ್ವು ಹಣ ಗಳಿಸುವ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ದಂಧೆ ತಳ್ಳಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆರೋಪಿಗಳಿಂದ ನಗದು, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ 4 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ABOUT THE AUTHOR

...view details