ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿಯಿಟ್ಟ ಪ್ರಕರಣ ಸಂಬಂಧ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಹೆಚ್ಒಡಿ ಬೆಂಜಮಿನ್ ಸೇರಿ ಹಲವರಿಂದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಮಾಜಿ ಮೇಯರ್ ಸಂಪತ್ ರಾಜ್ಗೆ ಚಿಕಿತ್ಸೆ ನೀಡಿದ ಸಂಬಂಧ ವೈದ್ಯರು ಸಿಸಿಬಿ ತನಿಖಾಧಿಕಾರಿಗಳಿಗೆ ಪತ್ರದ ಮೂಲಕ ವಿವರಣೆ ನೀಡಿದ್ದಾರೆ. ಸೆಪ್ಟೆಂಬರ್ 14ರಿಂದ 29ರವರೆಗೂ ಕೋವಿಡ್ ರೋಗಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು. 2ನೇ ಬಾರಿ ಅಕ್ಟೋಬರ್ 4ರಿಂದ 14ರವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಹೇಳಿಕೆ ನೀಡಿದ್ದಾರೆ.