ಬೆಂಗಳೂರು: ಅಕ್ರಮವಾಗಿ ನಡೆಸ್ತಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಕ್ಕಾ ಬಾರ್ ಮೇಲೆ ಸಿಸಿಬಿ ದಾಳಿ; ಆರೋಪಿಗಳು ಅಂದರ್ - police ride on hukka bar
ಅಕ್ರಮವಾಗಿ ನಡೆಸ್ತಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರ ದಾಳಿ
ಮ್ಯಾನೇಜರ್ ನಿಜಾಮ್, ಕ್ಯಾಶಿಯರ್ ದಾವೂದ್ ಹಾಗೂ ಸದ್ದಾಮ್ ಬಂಧಿತ ಆರೋಪಿಗಳು. ಈ ಆರೋಪಿಗಳು ಹೊಸೂರು ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದರು. ಈ ಮಾಹಿತಿ ತಿಳಿದು ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 11ಹುಕ್ಕಾ ಪೋಟ್ ಸೇರಿದಂತೆ 5,200 ನಗದು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.