ಮಹದೇವಪುರ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಯಿಂದಾಗುವ ಅನಾಹುತ ಮತ್ತು ಪರಿಸರ ಮಾಲಿನ್ಯ ತಡೆಗಟ್ಟು ಸಲುವಾಗಿ ಲಿಟಲ್ಎಲಿ ಶಾಲೆಯ ಪುಟ್ಟ ಮಕ್ಕಳು ಪಟಾಕಿ ಬೇಡವೆಂದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಶಾಲಾ ಮಕ್ಕಳಿಂದ ಜಾಗೃತಿ
ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಯಿಂದಾಗುವ ಅನಾಹುತ ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವ ಬಗ್ಗೆ ಅರಿವು ಮೂಡಿಸಲಾಯಿತು. ಖಾಸಗಿ ಶಾಲೆಯೊಂದರ ಪುಟ್ಟ ಮಕ್ಕಳು ಪಟಾಕಿ ಬೇಡವೆಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ಲಿಟಲ್ಎಲಿ ಶಾಲಾ ಮಕ್ಕಳಿಂದ ಜಾಗೃತಿ
ಪ್ರತಿವೋರ್ವರು ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಮಕ್ಕಳು ನಗರದ ಇಬ್ಬಲೂರು ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಬಿತ್ತಿ ಪತ್ರಗಳನ್ನು ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಪಟಾಕಿ ಶಬ್ದದಿಂದ ಪ್ರಾಣಿ ಪಕ್ಷಿಗಳು ನರಳುತ್ತವೆ. ವಾಯುಮಾಲಿನ್ಯದಿಂದ ಮನುಷ್ಯರು ಅನಾರೋಗ್ಯದಿಂದ ಬಳಲುತ್ತಾರೆ. ಪಟಾಕಿ ಸಿಡಿಸುವುದರಿಂದ ಶಬ್ದ ಮತ್ತು ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವಾಗುತ್ತದೆ. ಆದ್ದರಿಂದ ಪಟಾಕಿ ಸಿಡಿಸದೇ ಪರಿಸರವನ್ನು ಉಳಿಸಿ ಎಂಬ ಬಿತ್ತಿ ಪತ್ರಗಳನ್ನು ಹಿಡಿದು, ಪುಟ್ಟ ಪುಟ್ಟ ಮಕ್ಕಳು ಸಾರ್ವಜನಿಕರಿಗೆ ಮನವಿ ಮಾಡಿದರು.