ಬೆಂಗಳೂರು:ಹಿಂದೂಗಳಿಗೆ ಯುಗಾದಿ ಹಬ್ಬದಿಂದ ಹೊಸ ವರ್ಷ ಆರಂಭವಾಗುತ್ತದೆ. ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸಬೇಕು. ಈ ಸಂಬಂಧ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿರುವ ಅನೇಕ ಇಲಾಖೆಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ, ಧ್ಯೇಯೋದ್ದೇಶಗಳನ್ನು ಹೊಂದುವ ಹೆಸರಿನೊಂದಿಗೆ ವರ್ಷದ ಒಂದು ದಿನ ಇಲಾಖೆಯ ದಿನಾಚರಣೆಯನ್ನು ಆಚರಿಸುತ್ತಾರೆ. ಅದೇ ರೀತಿ ಧಾರ್ಮಿಕ ದತ್ತಿ ಇಲಾಖೆಯೂ ಕೂಡ ಧಾರ್ಮಿಕ ಹಿನ್ನೆಲೆ ಮತ್ತು ಮನೋಭಾವವನ್ನು ಹೊಂದಿರುವ ಇಲಾಖೆಯಾಗಿರುವುದರಿಂದ ವರ್ಷದಲ್ಲಿ ಒಂದು ದಿನವನ್ನು ಧಾರ್ಮಿಕ ದಿನವೆಂಬ ಹೆಸರಿನಿಂದ ಆಚರಣೆ ಮಾಡುವುದು ಸೂಕ್ತ. ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಇನ್ನು ಕೆಲವು ಭಾಗಗಳಲ್ಲಿ ಸೌರಮಾನ ಯುಗಾದಿಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರತಿವರ್ಷ ಶುಭಕೃತ್ ನಾಮ ಸಂವತ್ಸರ ಚಾಂದ್ರಮಾನ/ಸೌರಮಾನ ಯುಗಾದಿಯ ದಿನಗಳಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆಯನ್ನು ಆಚರಿಸುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಮದುವೆ ಲೈಸೆನ್ಸ್ ಅಲ್ಲ; ಪತ್ನಿಯ ಇಚ್ಛೆಗೆ ವಿರುದ್ಧದ ಪತಿಯ ಲೈಂಗಿಕ ಕ್ರಿಯೆ ಅತ್ಯಾಚಾರ: ಹೈಕೋರ್ಟ್
ರಾಜ್ಯ ಧಾರ್ಮಿಕ ದಿನಾಚರಣೆಯ ಮಾರ್ಗಸೂಚಿ:
1. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಯುಗಾದಿಯನ್ನು “ಧಾರ್ಮಿಕ ದಿನ"ವನ್ನಾಗಿ ಆಚರಿಸುವುದು.