ಕರ್ನಾಟಕ

karnataka

ETV Bharat / state

ಭಯೋತ್ಪಾದನಾ ವಿರೋಧಿ ದಿನ; ಸಿಎಂ ಕಚೇರಿಯಲ್ಲಿ ಪ್ರತಿಜ್ಞಾ ವಚನ ಬೋಧನೆ - ಸಿಎಂ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ

ಗೃಹ ಕಚೇರಿ 'ಕೃಷ್ಣಾ'ದಲ್ಲಿ ಇಂದು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಚನವನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೋಧಿಸಿದರು.

ಸಿಎಂ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ
ಸಿಎಂ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ

By

Published : May 21, 2021, 1:11 PM IST

ಬೆಂಗಳೂರು: ಇಂದು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಅಂಗವಾಗಿ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಜ್ಞಾ ವಚನ ಬೋಧಿಸಿದರು.

ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹ ಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಪಣ ತೊಡುತ್ತೇವೆ ಎಂಬ ಪ್ರತಿಜ್ಞಾ ವಿಧಿಯನ್ನು ಸಭೆಯಲ್ಲಿ ಹಾಜರಿದ್ದ ಎಲ್ಲರೂ ಸ್ವೀಕರಿಸಿದರು.

ರಾಜೀವ್ ಗಾಂಧಿ ಸ್ಮರಿಸಿದ ಸಿಎಂ:ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ನಮನಗಳು. ಅವರ ಪುಣ್ಯಸ್ಮರಣೆಯ ದಿನವನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಪ್ರಗತಿಗೆ ಕಂಟಕವಾಗಿರುವ ಭಯೋತ್ಪಾದನೆಯ ವಿರುದ್ಧ ಹೋರಾಡುವ ದೃಢ ಸಂಕಲ್ಪ ತಾಳೋಣ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ, ಸಂಸದ ಪಿ.ಸಿ. ಮೋಹನ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details