ಬೆಂಗಳೂರು :ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಕಾಂಗ್ರೆಸ್ ನಾಯಕರು ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ನಡೆಸಿದರು.
ರಾಜಭವನಕ್ಕೆ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಿಯೋಗ.. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ನಡೆದಿದೆ. ಕಾಂಗ್ರೆಸ್ ಪಕ್ಷದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ರಾಜಭವನಕ್ಕೆ ಪಾದಯಾತ್ರೆ ಆಗಮಿಸಿರುವ ಕಾಂಗ್ರೆಸ್ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನಿರ್ದೇಶನ ನೀಡುವಂತೆ ರಾಜ್ಯಪಾಲರನ್ನು ಕಾಂಗ್ರೆಸ್ ನಿಯೋಗ ಒತ್ತಾಯಿಸಿದೆ.
ಈಗಾಗಲೇ ಕಳೆದ ಐದು ದಿನಗಳ ಕಾಲ ನಿರಂತರವಾಗಿ ವಿಧಾನಸಭೆ ಅಧಿವೇಶನದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಪಕ್ಷ ಇಂದು ಕಲಾಪ ಮುಂದೂಡಿಕೆಯಾದ ಹಿನ್ನೆಲೆ ರಾಜಭವನಕ್ಕೆ ತೆರಳಿ ಇನ್ನೊಂದು ಹಂತದ ಹೋರಾಟಕ್ಕೆ ಮುಂದಾಗಿದೆ.
ಇದನ್ನೂ ಓದಿ:ವಿಧಾನಸಭೆಯಲ್ಲಿ ಸಂಬಳ, ಭತ್ಯೆ ವಿಧೇಯಕ ಅಂಗೀಕಾರ: ಸಿಎಂ, ಸಚಿವರ ಸಂಬಳದಲ್ಲಿ ಎಷ್ಟು ಏರಿಕೆ?