ಕರ್ನಾಟಕ

karnataka

ETV Bharat / state

ದೇಶದ ಅಭಿವೃದ್ಧಿಗೆ ಪೂರಕ, ಜನಪರ ಬಜೆಟ್ : ಸಚಿವ ಭೈರತಿ ಬಸವರಾಜ್

ಲೋಕಸಭೆಯಲ್ಲಿ ಮಂಡನೆಯಾಗಿರುವ 2022-23ನೇ ಸಾಲಿನ ಕೇಂದ್ರ ಬಜೆಟ್ ಕುರಿತಂತೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

Minister Byrathi Basavaraj spoke about union budget
ಕೇಂದ್ರ ಬಜೆಟ್ ಬಗ್ಗೆ ಭೈರತಿ ಬಸವರಾಜ್ ಪ್ರತಿಕ್ರಿಯೆ

By

Published : Feb 1, 2022, 5:40 PM IST

ಬೆಂಗಳೂರು: ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಭಾರತದ ಆರ್ಥಿಕತೆಗೆ ಚೈತನ್ಯ ತುಂಬುವ ಉತ್ತಮ ಬಜೆಟ್​​ ಅನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.

ನಗರಾಭಿವೃದ್ಧಿ, ಕೃಷಿ ಗ್ರಾಮೀಣಾಭಿವೃದ್ಧಿ, ನದಿಗಳ ಜೋಡಣೆ, ಮನೆ-ಮನೆಗೂ ಶುದ್ಧ ಕುಡಿಯುವ ನೀರು, ಪ್ರತಿ ಗ್ರಾಮಕ್ಕೂ 5ಜಿ ಸಂಪರ್ಕ, ಮೂಲ ಸೌಕರ್ಯ ಅಭಿವೃದ್ಧಿಗೆ 20 ಸಾವಿರ ಕೋಟಿ ರೂಪಾಯಿಗಳು, ವಿಶ್ವದರ್ಜೆಯ ಡಿಜಿಟಲ್ ಪಾಠಶಾಲೆ, ದೇಶದ ನೂರು ಜಿಲ್ಲೆಗಳ ನಗರಗಳಿಗೆ ಪೈಪ್​​​​​ಲೈನ್ ಮೂಲಕ ಗ್ಯಾಸ್ ಸಂಪರ್ಕ, ಬೆಂಗಳೂರು ಮೆಟ್ರೋ ರೈಲು ಮಾರ್ಗ ವಿಸ್ತರಣೆ ಮಾಡುವುದು ಮತ್ತಷ್ಟು ಅನುಕೂಲವಾಗುತ್ತದೆ ಎಂದರು.

ಇದನ್ನೂ ಓದಿ: ಕೇಂದ್ರ ಬಜೆಟ್-2022 : ಜನಸಾಮಾನ್ಯರಿಗೆ ಸಿಕ್ಕಿದ್ದೇನು?

ಬಜೆಟ್​​ನಲ್ಲಿ ಉತ್ಪಾದನಾ ಕ್ಷೇತ್ರಕ್ಕೆ ನೀಡಲಾಗಿರುವ ಆದ್ಯತೆ ಸೇರಿದಂತೆ ಎಲ್ಲಾ ವಲಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಈ ಮೂಲಕ ದೇಶದ ಎಲ್ಲಾ ವರ್ಗದ ಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ತಿಳಿಸಿದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details