ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಸಾವಿಗೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.
ಕೇಂದ್ರ ತನಿಖಾ ಸಂಸ್ಥೆಗಳ ಒತ್ತಡವೇ ರಮೇಶ್ ಆತ್ಮಹತ್ಯೆಗೆ ಕಾರಣ: ಕಾಂಗ್ರೆಸ್ ಆರೋಪ - ರಮೇಶ್ ಸಾವಿನ ಬಗ್ಗೆ ಕಾಂಗ್ರೆಸ್ ಟ್ವೀಟ್
ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಸಾವಿಗೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.
![ಕೇಂದ್ರ ತನಿಖಾ ಸಂಸ್ಥೆಗಳ ಒತ್ತಡವೇ ರಮೇಶ್ ಆತ್ಮಹತ್ಯೆಗೆ ಕಾರಣ: ಕಾಂಗ್ರೆಸ್ ಆರೋಪ](https://etvbharatimages.akamaized.net/etvbharat/prod-images/768-512-4730723-thumbnail-3x2-surya.jpg)
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ತಮ್ಮ ಬೇಸರ ಹೊರಹಾಕಿದ್ದು, ಕಾಂಗ್ರೆಸ್ ನಾಯಕರ ತೇಜೋವಧೆ ಮಾಡಲು, ಕಾರ್ಯಕರ್ತರ ಆತ್ಮವಿಶ್ವಾಸ ಕುಂದಿಸಲು, ಕೇಂದ್ರ ಸರ್ಕಾರ ತನ್ನ ಅಧೀನದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ ಇಲಾಖೆಯ ತೆರಿಗೆ ಭಯೋತ್ಪಾದನೆಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಐಟಿ ಅಧಿಕಾರಿಗಳ ಕಿರುಕುಳವೇ ರಮೇಶ್ ಸಾವಿಗೆ ಕಾರಣವಾಗಿದ್ದು, ಇವರ ಸಾವಿಗೆ ನ್ಯಾಯ ದೊರಕಬೇಕಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್ ಖಾತೆಯಲ್ಲಿ, ಆದಾಯ ತೆರಿಗೆ ಇಲಾಖೆಯ ಅಮಾನವೀಯ ಕಿರುಕುಳಕ್ಕೆ ಮತ್ತೊಂದು ಬಲಿ, ರಾಜ್ಯದ ಜನ ಬಿಜೆಪಿ ಸರ್ಕಾರವನ್ನು, ಆದಾಯ ತೆರಿಗೆ ಇಲಾಖೆಯನ್ನು ಪ್ರಶ್ನಿಸುತ್ತಿದ್ದಾರೆ. ಈ ಸಾವು ನ್ಯಾಯವೇ? ಎಂದು ಕೇಳಿದೆ. ರಮೇಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ. ಅವರ ಕುಟುಂಬದವರ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಓಂ ಶಾಂತಿ ಎಂದು ತಿಳಿಸಿದೆ.