ಬೆಂಗಳೂರು: ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಕರ್ನಾಟಕದಲ್ಲಿ ಆಶ್ರಯ ಕೊಟ್ಟಿದ್ದಕ್ಕಾಗಿ ಕೇಂದ್ರ ಸರ್ಕಾರ ಐಟಿ-ಇಡಿ ದುರ್ಬಳಕೆ ಮಾಡಿಕೊಂಡು ಡಿ.ಕೆ ಶಿವಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.
ಡಿಕೆಶಿ ವಿರುದ್ಧ ಕೇಂದ್ರ ಸರ್ಕಾರದ ಸೇಡು: ಸಿದ್ದರಾಮಯ್ಯ ಟ್ವೀಟ್ - d k shivakumar
ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಸಿಬಿಐ, ಇಡಿ ಮೊದಲಾದ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ದುರುಪಯೋಗ ಮಾಡುತ್ತಿರುವುದು ಖಂಡನೀಯ ಎಂದು ಕಿಡಿ ಕಾರಿದರು.
siddu
ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಅವರು, ಡಿಕೆಶಿ ತಪ್ಪು ಮಾಡಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಬಹುದಿತ್ತು, ಆದರೆ ತನಿಖಾ ಸಂಸ್ಥೆಗಳನ್ನು ದ್ವೇಷ ಸಾಧನೆಗೆ ದುರುಪಯೋಗ ಮಾಡುತ್ತಿರುವುದು ಖಂಡನಾರ್ಹ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಸಿಬಿಐ, ಇಡಿ ಮೊದಲಾದ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ದುರುಪಯೋಗ ಮಾಡುತ್ತಿರುವುದು ಖಂಡನೀಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿಯೇ ಎದುರಿಸಬೇಕೇ ಹೊರತು ಹೀಗೆ ಅಧಿಕಾರ ದುರ್ಬಳಕೆ ಮೂಲಕ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.