ಬೆಂಗಳೂರು : ಕೃಷಿಗೆ ಸಂಬಂಧಿಸಿದ ಮೂರು ಬಿಲ್ಗಳ ಬಗ್ಗೆ ಕೇಂದ್ರ ಸರ್ಕಾರ ಬಹಳ ಸ್ಪಷ್ಟವಿದೆ. ಮೂವತ್ತು ವರ್ಷಗಳಿಂದ ಅನೇಕ ಸಮಿತಿಗಳು ನೀಡಿರುವ ವರದಿಗಳ ಆಧಾರದಲ್ಲಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಇಂದು ನಡೆದ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಕಾರ್ಯಚಟುವಟಿಕೆ ಮತ್ತು ಕಾರ್ಯಕ್ಷಮತೆ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿನಾಥನ್ ವರದಿ ಪ್ರಕಾರ ಎಪಿಎಂಸಿ ಯಲ್ಲಿ ರೈತರಿಗೆ ಅನ್ಯಾಯಗುತ್ತಿದೆ ಅಂತ ಹೇಳಿದ್ದಾರೆ. ಹಾಗಾಗಿ, ರೈತರಿಗೆ ಅನುಕೂಲವಾಗುಂತಹ ಕಾಯಿದೆ ಜಾರಿಗೆ ತರಲಾಗಿದೆ. ಹನ್ನೊಂದು ಬಾರಿ ರೈತರ ಜೊತೆ ಮಾತುಕತೆ ನಡೆದಿದೆ. ಈಗಲೂ ಸಹ ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ದವಿದೆ ಎಂದರು.
ನಾನೀಗ ಜವಾಬ್ದಾರಿ ಸ್ಥಾನದಲ್ಲಿದ್ದೇನೆ:ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಡವಟ್ಟು ಹೇಳಿಕೆಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಅವರ ಹೇಳಿಕೆ ನನಗೆ ಯಾಕೆ ಕೇಳುತ್ತಿದ್ದಿರಿ?. ನಾನು ಈಗ ಜವಾಬ್ದಾರಿ ಸ್ಥಾನದಲ್ಲಿದ್ದೇನೆ. ನಾನು ಈಗ ಹೋರಾಟದ ಮೂಲಕ ಪ್ರತಿಕ್ರಿಯಿಸಲು ಆಗುವುದಿಲ್ಲ. ರಾಜ್ಯ ಸರ್ಕಾರ ಹಾಗೂ ಪೊಲೀಸರಿಗೆ ಹೇಳಬಹುದು ಅಷ್ಟೇ ಎಂದು ಹೇಳಿದರು.