ಕರ್ನಾಟಕ

karnataka

ETV Bharat / state

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಇನ್ವೆಸ್ಟ್​​ಮೆಂಟ್​ ಸಮಿತಿ ಅನುಮೋದನೆ: ಮುಖ್ಯಮಂತ್ರಿ ಹರ್ಷ - ಕೇಂದ್ರ ಜಲಶಕ್ತಿ ಸಚಿವಾಲಯ

ಭದ್ರಾ ಮೇಲ್ದಂಡೆ ಯೋಜನೆಯ 16,125 ಕೋಟಿ ರೂ. ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್ ಮೆಂಟ್ ಸಮಿತಿ ಸಭೆಯಲ್ಲಿ ಅನುಮೋದನೆ ದೊರೆತಿದೆ.

Upper Bhadra Project
ಮುಖ್ಯಮಂತ್ರಿ

By

Published : Mar 26, 2021, 6:27 AM IST

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯ 16,125 ಕೋಟಿ ರೂ. ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​​​ಮೆಂಟ್ ಸಮಿತಿ ಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಯಿಂದ ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿ ಯೋಜನೆಗೆ ಅನುಮೋದನೆ ದೊರಕಿಸಿ ಕೊಟ್ಟ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿಗಳು ನಾಡಿನ ಜನತೆಯ ಪರವಾಗಿ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.

ABOUT THE AUTHOR

...view details