ಒತ್ತಡಕ್ಕೆ ಮಣಿದರೇ ಸ್ಪೀಕರ್? ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅಸಮಾಧಾನ - ಕರ್ನಾಟಕ ರಾಜಕೀಯ ಬೆಳವಣಿಗೆಗಳು
ಸಭಾಧ್ಯಕ್ಷರ ಸದ್ಯದ ಆದೇಶ ನೋಡಿದರೆ ಈ ನಿರ್ಧಾರವನ್ನು ಯಾವುದೋ ಒತ್ತಡಕ್ಕೆ ಒಳಗಾಗಿ ಮಾಡಿದ್ದಾರೋ ಎನ್ನುವ ಸಂಶಯ ಮೂಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪೀಕರ್ ಟ್ವೀಟ್ ಮೂಲಕ ಸಂದೇಹ ವ್ಯಕ್ತಪಡಿಸಿದ್ದಾರೆ.
dv sadananda gowda tweet about mla's disqualified
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪ್ರಹಸನಕ್ಕೆ ತೆರೆ ಎಳೆಯುವ ರೀತಿಯಲ್ಲಿ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರ ನೋಡಿದರೆ, ಒತ್ತಡಕ್ಕೆ ಒಳಗಾಗಿ ಈ ತೀರ್ಮಾನಕ್ಕೆ ಬಂದಿರಬಹುದು ಎನಿಸುತ್ತದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ತಿಳಿಸಿದ್ದಾರೆ.