ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ, ವಿ.ಸೋಮಣ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ - central minister nirmala seetharaman visits temple
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಇದಕ್ಕೂ ಮುನ್ನ ಅವರು ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ನಾಮಪತ್ರ ಸಲ್ಲಿಕೆಗೂ ಮುನ್ನ ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್ ಅವರನ್ನು ಮಹಿಳಾ ಬಿಜೆಪಿ ಕಾರ್ಯಕರ್ತೆಯರು ಆರತಿ ಬೆಳಗಿ, ಅರಶಿಣ ಕುಂಕುಮ ನೀಡಿ ಮಂತ್ರ ಘೋಷಗಳೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕ ರವಿಸುಬ್ರಮಣ್ಯ ಮತ್ತು ಎಂಎಲ್ಸಿ ಭಾರತಿ ಶೆಟ್ಟಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಬೆಂಗಳೂರು: ತೈಲ ಖರೀದಿಸದೆ ಪೆಟ್ರೋಲ್ ಬಂಕ್ ಮಾಲೀಕರ ಸಾಂಕೇತಿಕ ಮುಷ್ಕರ
Last Updated : May 31, 2022, 12:04 PM IST