ಬೆಂಗಳೂರು: ಹೈಕೋರ್ಟ್‌ನಲ್ಲಿ ಹಾಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ ಎಂ.ಜಿ.ಎಸ್. ಕಮಲ್, ರಾಜೇಂದ್ರ ಬಾದಾಮಿಕರ್ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರ ಸೇವೆಯನ್ನು ಖಾಯಂಗೊಳಿಸಲಾಗಿದೆ.
ಮುಖ್ಯನ್ಯಾಯಮೂರ್ತಿ ಯು.ಯು. ಲಲಿತ್ ಅಧ್ಯಕ್ಷತೆಯಲ್ಲಿ ಸೆ.7ರಂದು ಸುಪ್ರೀಂಕೋರ್ಟ್‌ನ ಕೊಲಿಜಿಯಂ ನಡೆಸಿದ ಸಭೆಯಲ್ಲಿ ಈ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಖಾಯಂಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಅದರಂತೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಆದೇಶ ಹೊರಡಿಸಿದೆ.