ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿಯಲ್ಲಿ ಜನವರಿ 5 ರಿಂದ 7ರ ವರೆಗೆ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2024 ವನ್ನು ಕೃಷಿ ಇಲಾಖೆಯಿಂದ ಆಯೋಜನೆ ಮಾಡಲಾಗಿದೆ. ಈ ಮೇಳ ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸಂಪರ್ಕವನ್ನು ಕಲ್ಪಿಸಲು ಮತ್ತು ರೈತರು ಖರೀದಿದಾರರು, ಮಾರಾಟಗಾರರು, ರಫ್ತುದಾರರಿಗೆ ವಿಪುಲ ಅವಕಾಶಗಳನ್ನು ಒದಗಿಸುವ ಉದ್ದೇಶ ಹೊಂದಿದೆ.
ನಗರದ ಖಾಸಗಿ ತಾರಾ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, 2017, 2018, 2019 ಮತ್ತು 2023 ರ ಸಾವಯವ ಮತ್ತು ಸಿರಿಧಾನ್ಯಗಳ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಭಾಗವಹಿಸಿದ ಹೆಚ್ಚಿನ ಸಂಖ್ಯೆಯ ಪಾಲುದಾರರನ್ನು ಆಕರ್ಷಿಸಿ, ಆಸಕ್ತಿ ಹುಟ್ಟು ಹಾಕುವ ಮೂಲಕ ಉತ್ತಮ ಯಶಸ್ಸನ್ನು ಕಂಡಿದೆ. ಇದೇ ಆಸಕ್ತಿಯನ್ನು ಉಳಿಸಿ ಮುಂದಿನ ಮಟ್ಟಕ್ಕೆ ಕೊಂಡೊಯ್ಯಲು ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಈ ಬಾರಿಯೂ ಆಯೋಜನೆ ಮಾಡಲಾಗಿದೆ.
ಜನವರಿ 5 ರಿಂದ ಮೂರು ದಿನಗಳ ಕಾಲ ನಡೆಯುವ ಮೇಳವು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯ ಆಯೋಜನೆ Nodal Agency ಯಾಗಿರುತ್ತದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ GIZ, CFTRI IMR ಸಂಶೋಧನಾ ಸಂಸ್ಥೆಗಳು ಮೇಳದ ಆಯೋಜನೆಯಲ್ಲಿ ಸಹಭಾಗಿಗಳಾಗಿರುತ್ತಾರೆ. ಮೂರು ದಿನದ ಸಿರಿಧಾನ್ಯ & ಸಾವಯವ ಮೇಳವು ಈ ಕೆಳಗಿನ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ ಎಂದು ಮಾಹಿತಿ ನೀಡಿದರು.
ವಸ್ತುಪ್ರದರ್ಶನ :ಸಾವಯವ ಮತ್ತು ಸಿರಿಧಾನ್ಯಗಳ ಸಂಸ್ಥೆಗಳು, ಮಾರುಕಟ್ಟೆದಾರರು, ರಫ್ತುದಾರರು, ಚಿಲ್ಲರೆ ಮಾರಾಟಗಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಸಾವಯವ ಪರಿಕರಗಳ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸುತ್ತಿವೆ. ಮೇಳದಲ್ಲಿ ಉತ್ತರ ಪ್ರದೇಶ, ಪಂಜಾಬ್, ಆಂಧ್ರ ಪ್ರದೇಶ, ಮಹಾರಾಷ್ಟ್ರ ಒಡಿಸ್ಸಾ, ತಮಿಳುನಾಡು ಮತ್ತು ಮೇಘಾಲಯ ಮುಂತಾದ ರಾಜ್ಯಗಳು ಭಾಗವಹಿಸುತ್ತಿವೆ. ವಸ್ತು ಪ್ರದರ್ಶನದಲ್ಲಿ 281 ಮಳಿಗೆಗಳು ಇದ್ದು ಈಗಾಗಲೇ 248 ಮಳಿಗೆಗಳು ನೋಂದಣಿಯಾಗಿರುತ್ತದೆ ಎಂದರು.
ಕರ್ನಾಟಕ ಪೆವಿಲಿಯನ್ :ಕರ್ನಾಟಕದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು "Millets beyond boarders: Karnataka welcomes the world" ಎಂಬ ಶೀರ್ಷಿಕೆ (Theme) ಯೊಂದಿಗೆ ಪ್ರದರ್ಶಿಸಲಿದ್ದು, ICRISAT, IIMR, CFTRI, NIFTEM, UAS millet center of excellence ಈ ಮುಂತಾದ ಸಂಸ್ಥೆಗಳಿಂದ ಉತ್ತೇಜನಗೊಂಡಿರುವ ಕರ್ನಾಟಕದ ನವೋದ್ಯಮಿಗಳು (startups) ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ. ಸಿರಿಧಾನ್ಯ / ಸಾವಯವ ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಹಾಗೆಯೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ಸೇರಿದಂತೆ ಒಟ್ಟು 81 ಮಳಿಗೆಗಳು ಇರುತ್ತವೆ ಎಂದು ಚೆಲುವರಾಯಸ್ವಾಮಿ ಮಾಹಿತಿ ನೀಡಿದರು.
ಉತ್ಪಾದಕರು-ಮಾರುಕಟ್ಟೆಗಾರರ ಸಭೆ :ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮೇಳದಲ್ಲಿ ಉತ್ಪಾದಕರ- ಮಾರುಕಟ್ಟೆದಾರರ ಸಮಾಲೋಚನಾ ಸಭೆಗಳನ್ನು ಏರ್ಪಡಿಸಲಾಗುತ್ತದೆ. ಬಿ2ಬಿ ಸಭೆಗೆ ಈಗಾಗಲೇ 61 - Buyers and 54 sellers ನೋಂದಣಿ ಮಾಡಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಮಾರುಕಟ್ಟೆದಾರರು, FPO/ಒಕ್ಕೂಟಗಳು ಭಾಗವಹಿಸಲಿದ್ದಾರೆ.
ಅಂತಾರಾಷ್ಟ್ರೀಯ ಸಮ್ಮೇಳನ :ಅಂತಾರಾಷ್ಟ್ರೀಯ ಸಮ್ಮೇಳನವನ್ನು GIZ, IIMR ಹಾಗೂ ICCOA ಸಂಸ್ಥೆಯ ಸಹಯೋಗದೊಂದಿಗೆ "Transformation into organic and agroecology- based agriculture in Karnataka" ಎಂಬ ಶೀರ್ಷಿಕೆಯಡಿ ಸಮ್ಮೇಳನದಲ್ಲಿ 35ಕ್ಕಿಂತ ಹೆಚ್ಚು ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ. ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕರು/ವಿದ್ಯಾರ್ಥಿಗಳು ಹಾಗೂ ಇತರ ಪಾಲುದಾರರು ಭಾಗವಹಿಸುವರು ಎಂದು ಚಲುವರಾಯಸ್ವಾಮಿ ತಿಳಿಸಿದರು.