ಬೆಂಗಳೂರು:2021ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಮೊದಲ ದಿನವು ಯಶಸ್ವಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಪರೀಕ್ಷೆಗೆ ನೋಂದಣಿ ಮಾಡಿಸಿದ್ದ ಒಟ್ಟು 2,01,834 ಅಭ್ಯರ್ಥಿಗಳಲ್ಲಿ, 1,62,439 (80.48%) ಅಭ್ಯರ್ಥಿಗಳು ಜೀವಶಾಸ್ತ್ರ ವಿಷಯ ಮತ್ತು 1,89,522 (92.90%) ಅಭ್ಯರ್ಥಿಗಳು ಗಣಿತ ವಿಷಯಕ್ಕೆ ಹಾಜರಾಗಿದ್ದರು. 530 ಪರೀಕ್ಷಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವ ಮತ್ತು ಬೆಂಗಳೂರಿನಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ ಎಲ್ಲಾ ಸುರಕ್ಷತೆಯ ಕ್ರಮಗಳೊಂದಿಗೆ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.