ಕರ್ನಾಟಕ

karnataka

ETV Bharat / state

ಸೆಪ್ಟೆಂಬರ್​​ನಲ್ಲಿ ಸಿಇಟಿ ಕೌನ್ಸೆಲಿಂಗ್: ನಾಳೆಯಿಂದ ಆನ್​ಲೈನ್​ನಲ್ಲಿ ದಾಖಲೆ ಪರಿಶೀಲನೆ - ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಸಿಇಟಿ ಕೌನ್ಸೆಲಿಂಗ್​​ ಕುರಿತಾಗಿ ವಿಶೇಷ ಕೋಟಾದ ಶೇ.10ರಷ್ಟು ವಿದ್ಯಾರ್ಥಿಗಳ ದಾಖಲೆಗಳನ್ನು ಮಾತ್ರ ಭೌತಿಕವಾಗಿ ಪರಿಶೀಲಿಸಲಾಗುತ್ತಿದ್ದು, ಉಳಿದಂತೆ ಎಲ್ಲ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಆನ್​ಲೈನ್​ನಲ್ಲಿ ನಡೆಯಲಿದೆ.

cet-counselling-online-document-verification-from-august-5th
ಸೆಪ್ಟೆಂಬರ್​​ನಲ್ಲಿ ಸಿಇಟಿ ಕೌನ್ಸೆಲಿಂಗ್: ನಾಳೆಯಿಂದ ಆನ್​ಲೈನ್​ನಲ್ಲಿ ದಾಖಲೆ ಪರಿಶೀಲನೆ

By

Published : Aug 4, 2022, 10:34 PM IST

ಬೆಂಗಳೂರು: ಸೆಪ್ಟೆಂಬರ್​​ ಮೊದಲ ವಾರದಲ್ಲಿ ನಡೆಯಲಿರುವ ಸಿಇಟಿ ಕೌನ್ಸೆಲಿಂಗ್​​ಗೆ ಸಂಬಂಧಿಸಿದಂತೆ ಆಗಸ್ಟ್​ 5ರಿಂದ ಆನ್​ಲೈನ್ ಮೂಲಕ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಆರಂಭವಾಗಲಿದೆ. ರಕ್ಷಣೆ, ಎನ್‌ಸಿಸಿ, ಕ್ರೀಡೆ, ವಿಕಲಚೇತನ ಇತ್ಯಾದಿ ಕೋಟಾಗಳಡಿ ಬರುವ ಶೇ.10ರಷ್ಟು ವಿದ್ಯಾರ್ಥಿಗಳ ದಾಖಲೆಗಳನ್ನು ಮಾತ್ರ ಭೌತಿಕವಾಗಿ ಪರಿಶೀಲಿಸಲಾಗುತ್ತದೆ.

ನೀಟ್ ಪರೀಕ್ಷೆಯ ಫಲಿತಾಂಶ ಪ್ರಟಕವಾದ ಬಳಿಕ, ಅಲ್ಲಿಯ ಅಂಕಗಳನ್ನು ಪರಿಗಣಿಸಿ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್​​ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಬಾರಿ ಸಿಇಟಿ ಕೌನ್ಸೆಲಿಂಗ್​​ ಅತ್ಯಂತ ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಬಹುತೇಕ ಆನ್​ಲೈನ್​ನಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೈಗೊಂಡಿದೆ.

ಅಭ್ಯರ್ಥಿಗಳ ಆದಾಯ, ಜಾತಿ, ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರ, ಭಾಷಾ ಅಲ್ಪಸಂಖ್ಯಾತರ ಪ್ರಮಾಣ ಪತ್ರ, ಇತ್ಯಾದಿ ಪ್ರಮಾಣ ಪತ್ರಗಳನ್ನು ಆನ್​ಲೈನ್​ನಲ್ಲೇ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಿಂದ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಸಿಬಿಎಸ್​ಸಿ, ಐಸಿಎಸ್ಇ ಹೊರತುಪಡಿಸಿ ರಾಜ್ಯ ಪಠ್ಯಕ್ರಮದಲ್ಲಿ ಪಿಯುಸಿ ಮಾಡಿದವರ ಅಂಕ ಪಟ್ಟಿಗಳನ್ನು ಕೂಡ ಕೆಇಎ ಆನ್‌ಲೈನ್‌ನಲ್ಲಿ ಪಡೆದ ಸೀಟು ಹಂಚಿಕೆ ಮಾಡಲಿದೆ.

ವಿದ್ಯಾರ್ಥಿಗಳು ತಮ್ಮ ಮನೆಗಳಿಂದಲೇ ಸುಲಭ-ಸರಳವಾಗಿ ಅರ್ಜಿಗಳನ್ನು ಸಲ್ಲಿಸುವ ಹಾಗೆ ಮಾಡುವುದು ನಮ್ಮ ಉದ್ದೇಶ. ಈ ಸಲುವಾಗಿ ಸಾಫ್ಟ್‌ವೇರ್ ಉನ್ನತೀಕರಣ ಕೂಡ ಮಾಡಲಾಗುತ್ತಿದೆ. ಕೊನೆ ಹಂತದ ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯಾರ್ಥಿಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:ಮುಂದಿನ ವರ್ಷ ಯುವ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ

ABOUT THE AUTHOR

...view details