ಕರ್ನಾಟಕ

karnataka

ETV Bharat / state

ಸಿಇಟಿ ದಿನಾಂಕ ಪ್ರಕಟ: ಮೇ 20, 21ರಂದು ಪರೀಕ್ಷೆ - ಈಟಿವಿ ಭಾರತ ಕನ್ನಡ

ಮೇ 20 ಮತ್ತು 21ನ ರಂದು ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಸಿಇಟಿ ಪರೀಕ್ಷೆ ದಿನಾಂಕ
ಸಿಇಟಿ ಪರೀಕ್ಷೆ ದಿನಾಂಕ

By

Published : Feb 24, 2023, 10:53 PM IST

ಬೆಂಗಳೂರು:ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂಬರುವ ಮೇ 20 ಮತ್ತು 21ರಂದು ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೈಗೊಳ್ಳುವ ಪರೀಕ್ಷೆ ಸಂಬಂಧ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಈ ಮಾಹಿತಿ ನೀಡಿದ್ದಾರೆ. ಪ್ರಾಧಿಕಾರದ ಆದೇಶದಂತೆ, 20 ಮತ್ತು 21ರಂದು ಸಿಇಟಿ ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ. ಹೊರನಾಡು, ಗಡಿನಾಡು ವಿದ್ಯಾರ್ಥಿಗಳಿಗೆ ಈ ಕನ್ನಡ ಪರೀಕ್ಷೆ ನಡೆಸಲಾಗುತ್ತೆ. ಮೇ 22ರಂದು ಸಿಇಟಿ ಅಂಗವಾಗಿ ಕನ್ನಡ ಪರೀಕ್ಷೆ ನಡೆಯಲಿದೆ.

ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗುತ್ತೆ. ಇಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ (ಕೃಷಿ), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ(ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ(ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್) ಸೇರಿದಂತೆ ವಿವಿಧ ಕೋರ್ಸ್​ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ.

ಸಿಇಟಿ ಬಗ್ಗೆ ಕರ್ನಾಟಕ ಸರ್ಕಾರವು, ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಇಂಜಿನಿಯರಿಂಗ್ / ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ನಡೆಸುವುದಕ್ಕೆ ಮತ್ತು ಪ್ರವೇಶ ನೀಡುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೆರಿಟ್ ನಿರ್ಧರಿಸುವುದಕ್ಕಾಗಿ, ಮೊದಲ ಬಾರಿಗೆ ಪೂರ್ಣ ಸಮಯದ ಸೆಮಿಸ್ಟರಿಗೆ 1994ನೇ ವರ್ಷದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕವನ್ನು ಸ್ಥಾಪಿಸಿದೆ.

2022-23 ನೇ ಶೈಕ್ಷಣಿಕ ಸಾಲಿಗೆ ಆಕಾಶವಾಣಿ ಮೂಲಕ ಪ್ರಸಾರಿತ ಬಾನ್ ದನಿ ರೇಡಿಯೋ ಪಾಠ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ಹೊಸ ಸುತ್ತೋಲೆ ಹೊರಡಿಸಿದೆ. ಗುಣಾತ್ಮಕ ಶಿಕ್ಷಣದ ಗುರಿ ಸಾಧನೆಯೊಂದಿಗೆ ಡಿಜಿಟಲ್ ಉಪಕ್ರಮದ ಅಳವಡಿಕೆ ಹಾಗೂ ತರಗತಿ ಬೋಧನಾ-ಕಲಿಕಾ ಪ್ರಕ್ರಿಯೆಯಲ್ಲಿ ಏಕತಾನತೆಯನ್ನು ಹೋಗಲಾಡಿಸುವ ಉದ್ದೇಶದಿಂದ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಆಕಾಶವಾಣಿಯ ಮೂಲಕ ಬಾನ್ ದನಿ ಕಾರ್ಯಕ್ರಮದಡಿ ಶಾಲೆಗಳಲ್ಲಿ ರೇಡಿಯೋ ಪಾಠಗಳನ್ನು ಡಿಸೆಂಬರ್-2022ರ ಮಾಹೆಯಿಂದ ಮಾಡಲಾಗುತ್ತಿದೆ. 1 ರಿಂದ 9ನೇ ತರಗತಿಗಳಿಗೆ ನೀತಿ ಕತೆ, ಯೋಗ ಮತ್ತು ಆರೋಗ್ಯ ಶಿಕ್ಷಣ, ವೃತ್ತಿ ಶಿಕ್ಷಣ ಮತ್ತು ಶೈಕ್ಷಣಿಕ ಮಾರ್ಗದರ್ಶನ ಹಾಗೂ ಇಂಗ್ಲಿಷ್ ಕಲಿಕೆಯನ್ನೊಳಗೊಂಡ ಸಾಮಾನ್ಯ ಪಾಠಗಳು ಮತ್ತು 4 ಹಾಗೂ 5 ನೇ ತರಗತಿಗಳಿಗೆ ಕನ್ನಡ ಮತ್ತು ಗಣಿತ ವಿಷಯಗಳ ಕಲಿವಿನ ಫಲ ಆಧಾರಿತ ಪಾಠಗಳು ಆಕಾಶವಾಣಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಧ್ಯಾಹ್ನ 2.35 ರಿಂದ 3.00 ಗಂಟೆಯವರೆಗೆ ಪ್ರಸಾರಗೊಳ್ಳುತ್ತಿವೆ.

ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆಗಾಗಿ ಬಾನ್‌ದನಿ ಕಾರ್ಯಕ್ರಮಗಳು 27 ಫೆಬ್ರವರಿ-2023 ರಿಂದ ಪ್ರಸಾರಗೊಳ್ಳಲಿದ್ದು, ಈ ಕಾರ್ಯಕ್ರಮಗಳನ್ನು 13 ಆಕಾಶವಾಣಿ ಕೇಂದ್ರಗಳು ಹಾಗೂ 3 ವಿವಿಧ ಭಾರತಿ ಎಫ್ ಎಂ ಕೇಂದ್ರಗಳಿಂದ ಏಕಕಾಲದಲ್ಲಿ ರೇಡಿಯೋ ಅಲ್ಲದೆ, ಸಾಮಾನ್ಯ ಮೊಬೈಲ್, ಆಲ್ ಇಂಡಿಯಾ ರೇಡಿಯೋ ಬೆಂಗಳೂರು ಯೂಟ್ಯೂಬ್ ಸ್ಟ್ರೀಮಿಂಗ್​ನಲ್ಲಿ ಮತ್ತು ಜಗತ್ತಿನಾದ್ಯಂತ ಪ್ರಸಾರ ಭಾರತಿ ನ್ಯೂಸ್ ಆನ್ ಏರ್ ಆಪ್ ನಲ್ಲಿಯೂ ಕೇಳಬಹುದು ಎಂದು ಶಿಕ್ಷಣ ಇಲಾಖೆ ಸುತ್ತೊಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಉಗ್ರ ಕೃತ್ಯಕ್ಕೆ ಸಂಚು: ಮೂವರು ಶಂಕಿತರು ದೋಷಿ; ಫೆ.27ಕ್ಕೆ ಶಿಕ್ಷೆ ಕಾಯ್ದಿರಿಸಿದ ಕೋರ್ಟ್

ABOUT THE AUTHOR

...view details