ಕರ್ನಾಟಕ

karnataka

ETV Bharat / state

ಏಪ್ರಿಲ್​​​ನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ: ಅಶ್ವತ್ಥ್​ ನಾರಾಯಣ

ಏಪ್ರಿಲ್ 22, 23ರಂದು ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್​ ನಾರಾಯಣ ಮಾಹಿತಿ ನೀಡಿದ್ದಾರೆ.

CET Exam Postponement: DCM   Ashwathnarayana
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ

By

Published : Mar 30, 2020, 9:04 PM IST

ಬೆಂಗಳೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆಯುವ ಸಿಇಟಿ ಪರೀಕ್ಷೆ ಮುಂದೂಡಲಾಗಿದೆ. ಮುಂದಿನ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್​ ನಾರಾಯಣ ಮಾಹಿತಿ ನೀಡಿದ್ದಾರೆ.

ಏಪ್ರಿಲ್​​ನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ: ಅಶ್ವತ್ಥ್​ ನಾರಾಯಣ
ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಪರೀಕ್ಷೆ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ನಂತರ‌ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details