ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅಡ್ಡಿ ಆತಂಕ ಇಲ್ಲದೆ ಸಿಇಟಿ ಪರೀಕ್ಷೆ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 1,94,419 ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿ ಮಾಡಿಕೊಂಡಿದ್ರು. ಈ ಪೈಕಿ ಭೌತಶಾಸ್ತ್ರ ವಿಷಯವನ್ನು 1,75, 428 ವಿದ್ಯಾರ್ಥಿಗಳು ಹಾಜರಾಗಿದ್ದು, ಶೇ 93 ಹಾಜರಾತಿ ದಾಖಲಾಗಿದೆ. ರಸಾಯನಶಾಸ್ತ್ರ ವಿಷಯವನ್ನು1,75,337 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ 90.88 ಹಾಜರಾತಿ ದಾಖಲಾಗಿದೆ. ಇವರಲ್ಲಿ 63 ಕೊರೊನಾ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಇನ್ನು ಕೊರೊನಾ ಆತಂಕದ ನಡೆವೆಯೂ ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಹಾಜರಾತಿ ಇದೆ. ಅಲ್ಲದೆ ಇಂತಹ ಸಂದರ್ಭದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸರ್ಕಾರದ ವತಿಯಿಂದ ಧನ್ಯವಾದ ಎಂದು ಹೇಳಿದ್ದಾರೆ.
ಇನ್ನು ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಸಿಇಟಿ ಪರೀಕ್ಷೆ ಇಂದು ನಡೆಯಲಿದೆ. ಮಂಗಳೂರು, ಬೆಂಗಳೂರು,ವಿಜಯಪುರ,ಬಳ್ಳಾರಿ,ಬೀದರ್ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೇಂದ್ರ ಅತ್ಯುತ್ತಮವಾಗಿ ಪರೀಕ್ಷೆಯನ್ನು ನಿರ್ವಹಣೆ ಮಾಡಿದೆ. ಸಿಇಟಿ ಹೆಲ್ಪ್ಲೈನ್ಗೆ ಗುರುವಾರ ಸುಮಾರು 200ಕ್ಕೂ ಹೆಚ್ಚು ಕರೆಗಳು ಬಂದಿದ್ದವು. ಅದರಲ್ಲಿ 10 ರಿಂದ 15 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಬದಲಾವಣೆಗೆ ಮನವಿ ಮಾಡಿದ್ದರು. ಆ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರ ನೆರವು ನೀಡಿದೆ ಹಾಗೂ ಯೂಸರ್ ಐಡಿ ಸಮಸ್ಯೆ ಇದ್ದವರಿಗೆ ಪವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಸಹಾಯ ಮಾಡಲಾಗಿದೆ.
ಮಾಸ್ಕ್ ಇಲ್ಲದೆ ಬಂದ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಲಾಗಿದ್ದು, ಒಟ್ಟಾರೆ ಸಿಇಟಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. 15 ರಿಂದ20 ದಿನಗಳ ಒಳಗೆ ಸಿಇಟಿ ಫಲಿತಾಂಶ ಪ್ರಕಟಿಸಲಾಗುವುದು ಹಾಗೂ ಕೌನ್ಸಲಿಂಗ್ ಅನ್ನು ಈ ವರ್ಷ ಆನ್ ಲೈನ್ನಲ್ಲಿಯೇ ಮಾಡಲಾಗುವುದು ಎಂದು ಡಾ. ಸಿ ಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.