ಬೆಂಗಳೂರು:ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ KCET Results-2022 ಅಥವಾ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವು ನಾಳೆ (ಶನಿವಾರ) ಪ್ರಕಟಗೊಳ್ಳಲಿದೆ. ಈ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯು ಜೂನ್ 16, 17 ಮತ್ತು 18ರಂದು ನಡೆದಿತ್ತು.
ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಮತ್ತು ಭವಿಷ್ಯ ತೀರ್ಮಾನಿಸುವಲ್ಲಿ ಪ್ರಮುಖ ಪಾತ್ರವಹಿಸುವ ಸಿಇಟಿ ಫಲಿತಾಂಶ ಜುಲೈ 30ರಂದು ಹೊರಬೀಳಲಿದ್ದು, ಬಳಿಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಕಾಲೇಜುಗಳಿಗೆ ಸೇರಬಹುದಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಬಿಎಸ್‌ಇ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಪಡೆದಿರುವ ಅಂಕಗಳನ್ನೂ ಸಿಇಟಿ ರ‍್ಯಾಂಕ್‌ನಲ್ಲಿ ಪರಿಗಣಿಸಲಾಗುತ್ತದೆ.