ಬೆಂಗಳೂರು:ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ (KCET 2023) ಈಗಾಗಲೇ ವೇಳಾಪಟ್ಟಿ ಪ್ರಕಟಗೊಂಡಿದೆ. ಅದರಂತೆ ಮೇ 20ರ ಶನಿವಾರ ಮತ್ತು ಭಾನುವಾರ ಪರೀಕ್ಷೆ ನಡೆಸಲು ಕೆಇಎ ಸಕಲ ಸಿದ್ಧತೆ ಮಾಡಿ ಕೊಂಡಿದೆ.
ಸಿಇಟಿ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ:ಈ ಬಾರಿ 2,61,610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಿದೆ. ಬೆಳಗ್ಗೆ 10:30 ರಿಂದ 11:50ರ ವರೆಗೆ ಜೀವಶಾಸ್ತ್ರ ಮತ್ತು ಮಧ್ಯಾಹ್ನ 2:30 ರಿಂದ 3:50 ರವರೆಗೆ ಗಣಿತದ ಪರೀಕ್ಷೆ ನಿಗದಿಯಾಗಿದೆ.
ಇದನ್ನೂ ಓದಿ:ಶೀಘ್ರವೇ ಟ್ವಿಟರ್ನಲ್ಲಿ ಬರಲಿದೆ ವಾಯ್ಸ್ ಹಾಗೂ ವಿಡಿಯೋ ಚಾಟ್ ಹೊಸ ಫೀಚರ್: ಎಲೋನ್ ಮಸ್ಕ್
ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್, ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ (ಕೃಷಿ), ಬಿಎಸ್ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ), ಬಿಎಸ್ಸಿ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ ಮತ್ತು ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), ಮತ್ತು (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.
ಇದನ್ನೂ ಓದಿ:ಏಳು ಸಾವಿರಕ್ಕೂ ಅಧಿಕ ನಾರ್ಕೋಟಿಕ್ ಇಂಜೆಕ್ಷನ್ಗಳ ಜಪ್ತಿ ಮಾಡಿದ ಪೊಲೀಸರು