ಬೆಂಗಳೂರು: ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾದ ವತಿಯಿಂದ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನೆಗೆ ತೆರಳಿ ಚಡ್ಡಿ ತಲುಪಿಸುವ ಅಭಿಯಾನ ನಡೆಸಲಾಗುವುದು. ಜನರಿಂದ ಸಂಗ್ರಹಿಸಿದ ಚಡ್ಡಿಗಳನ್ನು ಸಿದ್ದರಾಮಯ್ಯ ಅವರ ಮನೆಗೆ ತಲುಪಿಸುವ ಆಂದೋಲನ ನಡೆಯಲಿದೆ.
ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬೆಂಗಳೂರಿನ ಗಾಂಧಿ ಭವನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ತೆರಳಲಿದ್ದಾರೆ.