ಕರ್ನಾಟಕ

karnataka

ETV Bharat / state

ಬೆಂಗಳೂರು: 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್‌ - chain snatching news

ರಾಮಮೂರ್ತಿ ನಗರ ಠಾಣೆ, ಹೆಣ್ಣೂರು, ಬನಶಂಕರಿ, ಹೆಬ್ಬಾಳ, ಕೆ.ಆರ್‌.ಪುರಂ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 30 ಕ್ಕಿಂತ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಖತರ್ನಾಕ್​ ಕಳ್ಳ ಅರೆಸ್ಟ್
ಖತರ್ನಾಕ್​ ಕಳ್ಳ ಅರೆಸ್ಟ್

By

Published : Oct 20, 2021, 11:02 AM IST

ಬೆಂಗಳೂರು: ಮೋಜು, ಮಸ್ತಿ ನಡೆಸಲು 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮನೋರ್ವನನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ‌.

ಮೈಸೂರು ಮೂಲದ ಸುಹೈಲ್ ಬಂಧಿತ ಆರೋಪಿ. ಈತನಿಂದ 19 ಲಕ್ಷ ರೂ. ಮೌಲ್ಯದ 338 ಗ್ರಾಂ ಚಿನ್ನ ಹಾಗೂ 3 ಬೈಕ್​ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ರಾಮಮೂರ್ತಿ ನಗರ ಠಾಣೆಯಲ್ಲಿ ಈತನ ವಿರುದ್ಧ 9 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಹೆಣ್ಣೂರು, ಬನಶಂಕರಿ, ಹೆಬ್ಬಾಳ, ಕೆ.ಆರ್‌.ಪುರಂ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 30ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ವಿವಾಹಿತನಾಗಿದ್ದ ಆರೋಪಿ ಒಬ್ಬಂಟಿಯಾಗಿ ಸರಗಳ್ಳತನ ಕೃತ್ಯ ಎಸಗುತ್ತಿದ್ದ. ಈಗಾಗಲೇ ಮೂರು ಬಾರಿ ಜೈಲಿಗೆ ಹೋಗಿ ಬಂದಿರುವ ಈತ, ಬಳಿಕ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ. ಹೀಗಾಗಿ ಈತನ ವಿರುದ್ಧ ನ್ಯಾಯಾಲಯ ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು.

ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಮತ್ತೆ ತನ್ನ ಕೈ ಚಳಕ ತೋರಿಸಿದ್ದ ಸುಹೈಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇನ್ಸ್​ಪೆಕ್ಟರ್ ಮೆಲ್ವಿನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ABOUT THE AUTHOR

...view details