ಕರ್ನಾಟಕ

karnataka

ETV Bharat / state

ಚಾಮರಾಜನಗರ ಪ್ರಕರಣ: ಕಾನೂನು ಸೇವಾ ಪ್ರಾಧಿಕಾರದಿಂದ ವಿಚಾರಣೆ

ಕೋವಿಡ್ ಸೋಂಕು ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮುಖ್ಯಸ್ಥರಾಗಿರುವ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲಗೌಡ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಈ ಸಮಿತಿ ಸೀಜ್ ಆಗಿರುವ ದಾಖಲೆಗಳನ್ನು ಪರಿಶೀಲಿಸಿ, ಸತ್ಯಶೋಧನೆ ನಡೆಸಿ ಮೇ 10ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ

ಹೈಕೋರ್ಟ್
ಹೈಕೋರ್ಟ್

By

Published : May 5, 2021, 6:45 PM IST

ಬೆಂಗಳೂರು : ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಆಕ್ಸಿಜೆನ್ ಸಿಗದೇ 24 ರೋಗಿಗಳು ಸಾವನ್ನಪ್ಪಿದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ರಚಿಸಿ ಆದೇಶಿಸಿದೆ.

ಕೋವಿಡ್ ಸೋಂಕು ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮುಖ್ಯಸ್ಥರಾಗಿರುವ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲಗೌಡ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಈ ಸಮಿತಿ ಸೀಜ್ ಆಗಿರುವ ದಾಖಲೆಗಳನ್ನು ಪರಿಶೀಲಿಸಿ, ಸತ್ಯಶೋಧನೆ ನಡೆಸಿ ಮೇ 10ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ. ಅಲ್ಲದೇ ಈ ಸಮಿತಿಗೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಬೇಕು. ರಾಜ್ಯದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ಈ ನಿಟ್ಟಿನಲ್ಲಿ ಸಮಿತಿ ಸತ್ಯಶೋಧನೆ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಇದೇ ವೇಳೆ, ಸರ್ಕಾರ ಪ್ರಕರಣವನ್ನು ತನಿಖೆ ಮಾಡಲು ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರ ಸಮಿತಿ ನೇಮಕ ಮಾಡಿರುವುದಾಗಿ ಹೈಕೋರ್ಟ್​​​​ಗೆ ತಿಳಿಸಿದ್ದು, ಸಮಿತಿ ಮುಂದಿನ ಒಂದು ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸಲಿದೆ ಎಂದು ಸ್ಪಷ್ಟಪಡಿಸಿದೆ.

ABOUT THE AUTHOR

...view details