ಬೆಂಗಳೂರು:ಬಿಜೆಪಿ ಸರ್ಕಾರ ಬಹುಮತ ಸಾಬೀತಾದ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲು ತಯಾರಿ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅಲೋಕ್ ಕುಮಾರ್ ಸೇರಿ 18 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಸಾಧ್ಯತೆ - ಬಿಜೆಪಿ ಸರ್ಕಾರ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹಾಗೂ ಡಿಸಿಪಿ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲು ನೂತನ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹಾಗೂ ಡಿಸಿಪಿ ಸೇರಿದಂತೆ ಹಲವು ಅಧಿಕಾರಿಗಳ ವರ್ಗಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಬೆಂಗಳೂರು ನಗರದ ಪ್ರಮುಖ ಆಯಕಟ್ಟಿನ ಜಾಗದಲ್ಲಿರುವ ಡಿಸಿಪಿಗಳ ವರ್ಗಾವಣೆ ಲಿಸ್ಟ್ ರೆಡಿಯಾಗುತ್ತಿದೆ ಎನ್ನಲಾಗಿದೆ. ಇದರ ಜೊತೆಗೆ ಎಲ್ಲಾ ವಲಯಗಳ ಐಜಿಪಿಗಳ ಎತ್ತಂಗಡಿ ಮಾಡುವ ಸಾಧ್ಯತೆಯಿದೆ.
ವರ್ಗಾವಣೆ ಪ್ರಕ್ರಿಯೆ ಬೆನ್ನಲ್ಲೇ ಬೆಂಗಳೂರು ಕಮೀಷನರ್ಗಾಗಿ ಭಾರೀ ಲಾಬಿ ನಡೆಯುತ್ತಿದೆ ಎನ್ನಲಾಗಿದ್ದು, ಕಮೀಷನರ್ ರೇಸ್ನಲ್ಲಿ ಎಡಿಜಿಪಿಗಳಾದ ಭಾಸ್ಕರ್ ರಾವ್, ಕಮಲ್ ಪಂತ್, ಪ್ರತಾಪ್ ರೆಡ್ಡಿ ಹಾಗೂ ಸುನೀಲ್ ಅಗರವಾಲ್ ಹೆಸರು ಕೇಳಿ ಬರುತ್ತಿದೆ. ಭಾಸ್ಕರ್ ರಾವ್ ಹಾಗೂ ಕಮಲ್ ಪಂತ್ ಇಬ್ಬರಲ್ಲಿ ಒಬ್ಬರು ಕಮೀಷನರ್ ಆಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.